ಕಿಸಾನ್​ ಸಮ್ಮಾನ್​ ಹಣ ಪಾವತಿ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ: 6.5 ಕೋಟಿ ರೈತರ ಖಾತೆಗೆ ನೇರ ಹಣ ವರ್ಗಾವಣೆ

pm kissan photo -1 jan 02 2020
Published on

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್​ ಸಮ್ಮಾನ್​ ಹಣ ಪಾವತಿ ಯೋಜನೆಗೆ ವಿದ್ಯುಕ್ತ ಚಾಲನೆ ನೀಡಿದರು.

ಯೋಜನೆಯ ಫಲಾನುಭವಿಗಳಿಗೆ ವಿತರಿಸಲು 12 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದರು.
6.5 ಕೋಟಿ ಮಂದಿನ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆಯಾಗಲಿದೆ.

32 ಮಂಖದಿ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕರ್ಮಣ್​ ಪ್ರಶಸ್ತಿ ವಿತರಣೆ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾತನಾಡಿ ರೈತರ ಬದುಕು ಹಸನುಗೊಳಿಸಲು ಪ್ರಧಾನಿ ಮೋದಿ ಅವರು ಸಂಕಲ್ಪ ಮಾಡಿದ್ದಾರೆ. ಅತಿವೃಷ್ಟಿಯಿಂದ ಹಾನಿಯಾಗಿರುವ ಗ್ರಾಮಗಳ ಅಭಿವೃದ್ಧಿಗೆ ರಾಜ್ಯಕ್ಕೆ 50 ಸಾವಿರ ಕೋಟಿ ರೂಪಾಯಿ ಅನುದಾನ ಕೊಡಿ ಎಂದು ಅವರು ವೇದಿಕೆಯಲ್ಲಿ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net