ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ದಾಖಲು; ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಗಣ್ಯರು

mamata banerjee
Published on

ನವದೆಹಲಿ: ಪಕ್ಷದ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಹಾರೈಸಿದ್ದಾರೆ.

ರಾಜಕೀಯ ಕ್ಷೇತ್ರದ ಗಣ್ಯರಾದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕರು ಮಮತಾ ಬ್ಯಾನರ್ಜಿ ಶೀಘ್ರ ಗುಣಮುಖರಾಗಲಿ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಮಮತಾ ದೀದಿ ಅವರು ಶೀಘ್ರ ಗುಣಮುಖರಾಗಲಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಎಐಟಿಎಂಸಿ ಸಂಸ್ಥಾಪಕ ಅಧ್ಯಕ್ಷರಿಗೆ ನಾನು ಉತ್ತಮ ಆರೋಗ್ಯ ಮತ್ತು ಸಂಪೂರ್ಣ ಚೇತರಿಕೆಯನ್ನು ಬಯಸುತ್ತೇನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬರೆದುಕೊಂಡಿದ್ದಾರೆ.

ಸುದ್ದಿ ಮೂಲಗಳ ಪ್ರಕಾರ, ಅವರು ಮನೆಯಲ್ಲಿ ಬಿದ್ದಿದ್ದಾರೆ. ಕುಟುಂಬಸ್ಥರು, ಪಕ್ಷದ ಮುಖಂಡರು ಆಸ್ಪತ್ರೆಗೆ ಬರುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿ, ಕಲ್ಕತ್ತಾ ಮೇಯರ್ ಆಗಮಿಸಿದ್ದಾರೆ. ಮಮತಾ ಬ್ಯಾನರ್ಜಿ ಈ ದಿನ ನಬಣ್ಣಗೆ ಹೋಗಿದ್ದರು. ಅಲ್ಲಿಂದ ಎಕ್ಡಾಲಿಯಾಗೆ ಹೋಗಿ  ದಿವಂಗತ ಸುಬ್ರತಾ ಮುಖೋಪಾಧ್ಯಾಯ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಆ ಬಳಿಕ ಮಮತಾ ಮನೆಗೆ ತೆರಳಿದ್ದರು ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net