ಎಲ್​ಕೆ ಆಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

modi greets advani
Published on

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಹಿರಿಯ ನೇತಾರ ಲಾಲ್ ಕೃಷ್ಣ ಆಡ್ವಾಣಿ ಅವರು ಇಂದು 93ನೇ ಜನ್ಮದಿನ ಆಚರಿಸುತ್ತಿದ್ದಾರೆ. ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಪಕ್ಷದ ನಾಯಕರು, ಕಾರ್ಯಕರ್ತರು, ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭಾಜಪವನ್ನು ಜನರ ಬಳಿ ತಲುಪಿಸುವುದರ ಜತೆಗೆ ದೇಶದ ವಿಕಾಸದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಿದ ಶ್ರದ್ಧೇಯರಾದ ಶ್ರೀ ಲಾಲಕೃಷ್ಣ ಆಡ್ವಾಣಿ ಜಿಯವರಿಗೆ ಜನ್ಮದಿನದ ಶುಭಾಶಯಗಳು. ಕೋಟ್ಯಂತರ ಕಾರ್ಯಕರ್ತರು ಮತ್ತು ದೇಶವಾಸಿಗಳ ಪಾಲಿಗೆ ಅವರು ಜೀವಂತ ಪ್ರೇರಣಾದಾಯಿಗಳು. ಅವರಿಗೆ ಸುದೀರ್ಘ ಆಯುರಾರೋಗ್ಯವನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಕೀರ್ತಿ ಆಡ್ವಾಣಿಯವರದ್ದು. ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಅವರ ಆ ಸಂಘಟನಾ ಶಕ್ತಿಯೇ ಅವರನ್ನು ಮುಂಚೂಣಿಯ ನಾಯಕರನ್ನಾಗಿಸಿತು. 90ರ ದಶಕದಲ್ಲಿ ಪಕ್ಷವನ್ನು ಅಧಿಕಾರದ ಹೊಸ್ತಿಲಿಗೆ ತಂದು ನಿಲ್ಲಿಸಿತ್ತು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net