13,500 ಕೋಟಿ ರೂ.ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ| Modi

modi
Published on

Modi| ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಹಥುವಾದಲ್ಲಿ ಸುಮಾರು 13,500 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿ ಉದ್ಘಾಟಿಸಿದರು ಮತ್ತು 340 ಕೋಟಿ ಮೌಲ್ಯದ ನಾಲ್ಕು ಹೊಸ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ರೈಲು ಅನ್‌ಲೋಡಿಂಗ್ ಸೌಲಭ್ಯವಿರುವ ಎಲ್‌ಪಿಜಿ ಬಾಟ್ಲಿಂಗ್ ಘಟಕಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಇದು ಪೂರೈಕೆ ಸರಪಳಿಯನ್ನು ಸುಗಮಗೊಳಿಸಲು ಮತ್ತು ಬೃಹತ್ ಎಲ್‌ಪಿಜಿ ಸಾಗಣೆಯ ದಕ್ಷತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಸಹರ್ಸಾ ಮತ್ತು ಮುಂಬೈ ನಡುವಿನ ಅಮೃತ್ ಭಾರತ್ ಎಕ್ಸ್‌ಪ್ರೆಸ್, ಜಯನಗರ ಮತ್ತು ಪಾಟ್ನಾ ನಡುವಿನ ನಮೋ ಭಾರತ್ ರಾಪಿಡ್ ರೈಲು ಮತ್ತು ಪಿಪ್ರಾ ಮತ್ತು ಸಹರ್ಸಾ ಮತ್ತು ಸಹರ್ಸಾ ಮತ್ತು ಸಮಸ್ತಿಪುರ ನಡುವಿನ ನಾಲ್ಕು ಹೊಸ ರೈಲುಗಳಿಗೆ ಚಾಲನೆ ನೀಡಲಾಯ್ತು.

ಇದೇ ವರ್ಷ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಮ್ಮ ಚುನಾವಣೆ ಸಿದ್ಧತೆಯನ್ನು ಕಳೆದ ಒಂದೆರಡು ತಿಂಗಳಿನಿಂದ ಆರಂಭಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಹಾರಕ್ಕೆ ನೀಡುವ ಭೇಟಿಯು ಮುಂಬರುವ ವಿಧಾನಸಭಾ ಚುನಾವಣೆಯ ಹಿತದೃಷ್ಟಿಯಿಂದ ಮಹತ್ವದ್ದಾಗಿದೆ. ಇದೇ ಕಾರಣಕ್ಕೆ ಮೋದಿ ರೂ.13500 ಕೋಟಿ ರೂಪಾಯಿಯ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net