ಆಗಸ್ಟ್​ 23ಕ್ಕೆ ಯೂಕ್ರೇನ್​ಗೆ ಪ್ರಧಾನಿ ಮೋದಿ ಪ್ರವಾಸ: ರಷ್ಯಾ ಆಕ್ರಮಣ ಬಳಿಕ ಮೊದಲ ಭೇಟಿ

PM Modi
Published on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಆಗಸ್ಟ್ 23ರಂದು ಯುದ್ಧಪೀಡಿತ ಯೂಕ್ರೇನ್​ಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿ ಭೇಟಿ ನೀಡಿದ್ದಲ್ಲಿ, ಯೂಕ್ರೇನ್​ ಮೇಲೆ ರಷ್ಯಾ ಆಕ್ರಮಣದ ನಂತರದ ಮೊದಲನೇ ಭೇಟಿ ಇದಾಗಲಿದೆ. ಇತ್ತೀಚೆಗಷ್ಟೇ ಮೋದಿ ಅವರು ರಷ್ಯಾಗೆ ಭೇಟಿ ನೀಡಿ, ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಅವರ ಜತೆ ಮಾತುಕತೆ ನಡೆಸಿದ್ದರು. ಇದೀಗ ಯೂಕ್ರೇನ್​ ಭೇಟಿ ತುಂಬಾ ಮಹತ್ವ ಪಡೆದುಕೊಂಡಿದೆ.

ಸುಮಾರು ಒಂದು ತಿಂಗಳ ಹಿಂದೆ ಪ್ರಧಾನಿ ಮೋದಿ ಅವರು ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದರು. ಇದೀಗ ಯೂಕ್ರೇನ್​ ಪ್ರವಾಸದ ಮೂಲಕ ಯುದ್ಧಪೀಡಿತ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಮೊದಲ ಭೇಟಿ ನೀಡಲಿದ್ದು, ಉಭಯ ನಾಯಕರ ನಡುವೆ ಏನೆಲ್ಲಾ ಮಾತುಕತೆಗಳು ನಡೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ.

ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು ರಷ್ಯಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಸಲ್ಲಿಸಿದ ಸೇವೆಗಾಗಿ ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್​ ಆಫ್​ ಸೇಂಟ್​ ಆ್ಯಂಡ್ರೀವ್​ ದಿ ಅಪೊಸ್ಟ್ಲ್​ ನೀಡಿ ಗೌರವಿಸಲಾಗಿತ್ತು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net