ಮಾಜಿ ಪ್ರಧಾನಿ ಮನಮೋಹನ್​​​ ಸಿಂಗ್ ವಿಧಿವಶ; ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ | Manmohan Singh

Untitled design (29)
Published on

ನವದೆಹಲಿ: ಭಾರತದ ಅತ್ಯುತ್ತಮ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು ಮತ್ತು ಭಾರತದ ಮಾಜಿ ಪ್ರಧಾನಿಯಾದ ಮನಮೋಹನ್ ಸಿಂಗ್(Manmohan Singh) ಅವರು ಗುರುವಾರ(ಡಿಸೆಂಬರ್​ 26) ರಾತ್ರಿ ದೆಹಲಿಯ ಏಮ್ಸ್‌ನಲ್ಲಿ 92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​​​ ಅವರಿಗೆ ಪಕ್ಷಾತೀತವಾಗಿ ನಾಯಕರು ನಮನ ಸಲ್ಲಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ರಾಜಕೀಯ ನಾಯಕರು ಶುಕ್ರವಾರ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ಮನಮೋಹನ್​ ಸಿಂಗ್​​​​ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು ಮತ್ತು ಅವರ ಪತ್ನಿ ಗುರುಶರಣ್ ಕೌರ್ ಅವರನ್ನು ಭೇಟಿ ಮಾಡಿದರು.

ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರನ್ನು ಕಳೆದುಕೊಂಡಿದೆ. ಸಿಂಗ್ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂವಾದವನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ನಾವು ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ವ್ಯಾಪಕವಾದ ಚರ್ಚೆಗಳನ್ನು ನಡೆಸಿದ್ದೇವೆ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ಗೋಚರಿಸುತ್ತದೆ ಎಂದು ಹೇಳಿದ್ದಾರೆ.

ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸಿದ ಹಲವಾರು ಕ್ರಾಂತಿಕಾರಕ ಸುಧಾರಣೆಗಳ ಶಿಲ್ಪಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯು ಶನಿವಾರ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸ್ಟ್ಯಾನ್‌ಫೋರ್ಡ್ ಲಾ ಸ್ಕೂಲ್‌ನಲ್ಲಿ ಪ್ರೊಫೆಸರ್ ಆಗಿರುವ ಸಿಂಗ್ ಅವರ ಕಿರಿಯ ಮಗಳು ಸಂಜೆಯ ವೇಳೆಗೆ ಭಾರತಕ್ಕೆ ಬಂದಿಳಿಯುವ ಸಾಧ್ಯತೆಯಿದ್ದು ಶನಿವಾರದಂದು ರಾಜ್​ಘಾತ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net