

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 76ನೇ ಜಯಂತಿ ಪ್ರಯುಕ್ತ ಅವರಿಗೆ ಗೌರವ ಸಮರ್ಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ರಾಜೀವ್ ಗಾಂಧಿಯವರ ಜನ್ಮದಿನದ ನಿಮಿತ್ತ ಗೌರವ ಸಲ್ಲಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ರಾಜೀವ್ ಗಾಂಧಿ ಅವರು 1944ರ ಆಗಸ್ಟ್ 20ರಂದು ಜನಿಸಿದರು. ಅವರು 1984ರ ಅಕ್ಟೋಬರ್ ತಿಂಗಳಲ್ಲಿ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆಗ ಅವರು ದೇಶದ ಅತ್ಯಂತ ಯುವ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿದ್ದರು. ಅವರು 1989ರ ಡಿಸೆಂಬರ್ 2ರ ತನಕ ಪ್ರಧಾನಿಯಾಗಿದ್ದರು. 1991 ಮೇ ತಿಂಗಳಲ್ಲಿ ತಮಿಳುನಾಡಿನ ಶ್ರೀಪೆರುಂಬದೂರ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ವೇಳೆ ಎಲ್ಟಿಟಿಇ ಉಗ್ರರ ಆತ್ಮಹತ್ಯಾ ದಾಳಿಗೆ ಬಲಿಯಾದರು. ಕಾಂಗ್ರೆಸ್ ಪಕ್ಷ ರಾಜೀವ್ ಅವರ ಜನ್ಮದಿನವನ್ನು ಸದ್ಭಾವನಾ ದಿನ ಎಂದು ಆಚರಿಸುತ್ತಿದೆ. (ಏಜೆನ್ಸೀಸ್)