

ವಾರಣಾಸಿ: 18ನೇ ಸಾರ್ವತ್ರಕ ಚುನಾವಣೆಯ ಫಲಿತಾಂಶ ಇಂದು (ಜೂನ್ 04) ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್ ನಂಬರ್ನತ್ತ ದಾಪುಗಾಲಿಟ್ಟಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ 72,133 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.
ಆರಂಭಿಕ ಹಂತದ ಮತೆಎಣಿಕೆಯಲ್ಲಿ ಅಲ್ಪ ಹಿನ್ನಡೆಯನ್ನು ಸಾಧಿಸಿದ ಪ್ರಧಾನಿ ಮೋದಿ ಆ ನಂತರ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯದ 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದುಕೊಂಡಿತು, ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷವು ನಂತರ ಮಿತ್ರಪಕ್ಷಗಳು ಕ್ರಮವಾಗಿ 10 ಮತ್ತು ಐದು ಸ್ಥಾನಗಳನ್ನು ಗೆದ್ದವು. ಈ ಬಾರಿ, ಉತ್ತರಪ್ರದೇಶದಲ್ಲಿ ಕಠಿಣ ಪೈಪೋಟಿ ಎದುರಾಗಿದ್ದು, ಸಂಜೆ ವೇಳೆಗೆ ಅಂತಿಮ ಚಿತ್ರಣ ಹೊರಬೀಳಲಿದೆ.