ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ಸಾರ್ವಜನಿಕರಿಂದ ಹೊಸ ಆಲೋಚನೆ, ಸಲಹೆ ಕೇಳಿದ ಪ್ರಧಾನಿ ಮೋದಿ| Modi

modi
Published on

ನವದೆಹಲಿ: ಭಾರತವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಮೀಪಿಸುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜನರಿಗೆ ಮುಕ್ತ ಅವಕಾಶ ನೀಡಿದ್ದಾರೆ. ಮುಂಬರುವ ಆಗಸ್ಚ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಭವ್ಯ ಆಚರಣೆಗೆ ಸಿದ್ಧತೆಗಳು ಈಗಾಗಲೇ ಪ್ರಾರಂಭವಾಗಿವೆ. ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿಯವರ ಭಾಷಣ ಅತ್ಯಂತ ನಿರೀಕ್ಷಿತ ಕ್ಷಣಗಳಲ್ಲಿ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಗೋಡೆಯಿಂದ ಸತತ 12 ನೇ ಭಾಷಣ ಮಾಡಲಿದ್ದಾರೆ. ಇದಕ್ಕೂ ಮುನ್ನ, ಅವರು ದೇಶಾದ್ಯಂತದ ನಾಗರಿಕರಿಗೆ ತಮ್ಮ ಸಾಂಪ್ರದಾಯಿಕ ಭಾಷಣಕ್ಕಾಗಿ ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳುವಂತೆ ಕರೆ ನೀಡಿದ್ದಾರೆ.

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ನಿಮ್ಮ ಸಲಹೆಗಳನ್ನು ಕೊಡುಗೆ ನೀಡುವಂತೆ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ಹೇಳಿದ್ದೇನು?

(ಏಜೆನ್ಸೀಸ್)

ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕೆ ಸಾರ್ವಜನಿಕ ಸಲಹೆಗಳನ್ನು ಕೇಳುವ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್‌ನಲ್ಲಿ ಅವರು, ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಾಗ, ನನ್ನ ಸಹ ಭಾರತೀಯರಿಂದ ಕೇಳಲು ನಾನು ಎದುರು ನೋಡುತ್ತಿದ್ದೇನೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ನೀವು ಯಾವ ವಿಷಯಗಳು ಅಥವಾ ವಿಚಾರಗಳನ್ನು ಹಂಚಿಕೊಳ್ಳಲು ಬಯಸುತ್ತೀರಿ ಎಂದು ಬರೆದಿದ್ದಾರೆ. MyGov ಮತ್ತು NaMo ಅಪ್ಲಿಕೇಶನ್‌ನಲ್ಲಿನ ಮುಕ್ತ ವೇದಿಕೆಗಳಲ್ಲಿ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಿ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net