ವಯನಾಡ್‌ನ ಭೂಕುಸಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

modi
Published on

ತಿರುವನಂತಪುರಂ: ಪ್ರಧಾನಿ ನರೇಂದ್ರ ಓದಿ ಅವರು ಶನಿವಾರ(ಆ.10)ವಯನಾಡಿನಲ್ಲಿ ಭೂಕುಸಿತ ಪ್ರದೇಶಗಳ ವೈಮಾನಿಕ ತಪಾಸಣೆ ನಡೆಸುತ್ತಾರೆ.

ಪ್ರಸ್ತುತ ನಡೆಯುತ್ತಿರುವ ಪರಿಹಾರ ಮತ್ತು ಪುನರ್ವಸತಿ ಕಾರ್ಯಾಚರಣೆಗಳ ಮೌಲ್ಯಮಾಪನ ಮತ್ತು ಈ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಬದುಕುಳಿದವರೊಂದಿಗೆ ಮಾತುಕತೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಯನಾಡ್‌ಗೆ ಭೇಟಿ ನೀಡಲಿದ್ದಾರೆ.

ಅಧಿಕಾರಿಗಳ ಪ್ರಕಾರ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಮೋದಿ ಅವರು ಬೆಳಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದಿಳಿದಾಗ ಅವರನ್ನು ಸ್ವಾಗತಿಸುತ್ತಾರೆ, ನಂತರ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ತಪಾಸಣೆ ನಡೆಸುತ್ತಾರೆ.

ಅವರು ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಅಲ್ಲಿ ಭೂಕುಸಿತದಿಂದ ಸಂತ್ರಸ್ತರು ಮತ್ತು ಬದುಕುಳಿದವರನ್ನು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಮೋದಿ ಅವರು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಘಟನೆ ಮತ್ತು ನಡೆಯುತ್ತಿರುವ ಪರಿಹಾರ ಪ್ರಯತ್ನಗಳ ಬಗ್ಗೆ ವಿವರವಾಗಿ ಮಾಹಿತಿ ಪಡೆದುಕೊಳ್ಳುತ್ತಾರೆ.

ಜುಲೈ 30 ರಂದು ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 226 ಜನರು ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net