

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ದೇಶದ ವಿವಿಧ ಗ್ರಾಮ ಪಂಚಾಯಿತಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
ಅಂದು ರಾಷ್ಟ್ರೀಯ ಪಂಚಾಯತ್‌ರಾಜ್ ದಿನವಾದ ಹಿನ್ನೆಲೆಯಲ್ಲಿ ಪ್ರಧಾನಿಯವರ ಈ ಕಾರ‌್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಅವರು ಇ-ಗ್ರಾಮಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲಿದ್ದಾರೆ.
ಗ್ರಾಮಪಂಚಾಯಿತಿಯ ಅಭಿವೃದ್ಧಿ ಯೋಜನೆಯನ್ನು ರೂಪಿಸಲು ಈ ಪೋರ್ಟಲ್ ಸಹಾಯ ಮಾಡುತ್ತದೆ. ಗ್ರಾಮೀಣ ಭಾರತದಲ್ಲಿ ಆಸ್ತಿ ಮೌಲ್ಯ ನಿರ್ಧರಿಸುವುದಕ್ಕೆ ಸಂಬಂಧಿಸಿದ ಸ್ವಾಮಿತ್ವ ಯೋಜನೆಯನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ಉತ್ತಮವಾಗಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯಿತಿಗಳಿಗೆ ಅಂದು ಪ್ರಶಸ್ತಿಯ ಪ್ರಕಟಣೆಯೂ ಆಗಲಿದೆ.