

ನವದೆಹಲಿ: ರಕ್ಷಾಬಂಧನದ ಸಂದರ್ಭದಲ್ಲಿ ಪಾಕಿಸ್ತಾನದ ಕಮರ್ ಮೊಹ್ಸಿನ್ ಶೇಖ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟಲಿದ್ದಾರೆ. 30 ವರ್ಷಗಳಿಂದ ಪ್ರಧಾನಿ ಮೋದಿಗೆ ರಾಖಿ ಕಟ್ಟುತ್ತಿದ್ದಾರೆ.
ಪಾಕ್ ಸಹೋದರಿ ರಕ್ಷಾ ಬಂಧನ
"ನಾನು ಮೋದಿಯವರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ಕೋರುತ್ತೇನೆ. ಅವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ಪ್ರತಿದಿನ ಪ್ರಾರ್ಥಿಸುತ್ತೇನೆ. ನನ್ನ ಎಲ್ಲಾ ಆಸೆಗಳು ಈಡೇರುತ್ತವೆ ಎಂದು ನಾನು ನಂಬುತ್ತೇನೆ. ನಾನು ರಾಖಿ ಕಟ್ಟಿ ಅವರು ಪ್ರಧಾನಿಯಾಗಬೇಕೆಂದು ನನ್ನ ಆಸೆಯನ್ನು ವ್ಯಕ್ತಪಡಿಸಿದಾಗಲೆಲ್ಲಾ ದೇವರು ನನ್ನ ಎಲ್ಲಾ ಆಸೆಗಳನ್ನು ಪೂರೈಸುತ್ತಾನೆ, ಮೋದಿ ದೇಶಕ್ಕಾಗಿ ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ' ಎಂದು ಕಮರ್ ಮೊಹಿಸಿನ್ ಹೇಳಿದ್ದಾರೆ.
ಪ್ರತಿ ವರ್ಷ ಖಮರ್, ಪ್ರಧಾನಿ ಮೋದಿಗೆ ಕೈಯಿಂದ ಮಾಡಿದ ರಾಖಿಗಳನ್ನು ಕಟ್ಟುತ್ತಾರೆ. ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೂ ಕಮರ್ ಹೋಗಿ ಅವರ ಕೈಗೆ ರಾಖಿ ಕಟ್ಟಿದ್ದರು. ಅದನ್ನೇ ಈಗಲೂ ಮುಂದುವರೆಸಿದ್ದಾರೆ.
ಕೋವಿಡ್-19 ಸಮಯದಲ್ಲಿ ಪ್ರಧಾನಿ ಮೋದಿಗೆ ರಾಖಿ ಕಟ್ಟಲು ಸಾಧ್ಯವಾಗಲಿಲ್ಲ, ಆದರೆ ಅದನ್ನು ಪೋಸ್ಟ್ ಮೂಲಕ ಕಳುಹಿಸಿದ್ದೇನೆ. ಮದುವೆಯಾದ ನಂತರ ಕಳೆದ 30 ವರ್ಷಗಳಿಂದ ಮೋದಿಗೆ ರಾಖಿ ಕಟ್ಟುತ್ತಿದ್ದೇನೆ ಎಂದು ಕಮರ್ ವಿವರಿಸಿದ್ದಾರೆ. ಒಟ್ಟಿನಲ್ಲಿ ಪಾಕಿಸ್ತಾನದ ಸಹೋದರಿ 31ನೇ ಬಾರಿಗೆ ರಾಖಿ ಕಟ್ಟಲು ಪಾಕಿಸ್ತಾನದಿಂದ ದೆಹಲಿಗೆ ಬರುತ್ತಿದ್ದಾರೆ.