ವಡೋದರಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಕರ್ನಲ್ ಸೋಫಿಯಾ ಖುರೇಷಿ ಕುಟುಂಬ ಭಾಗಿ| Modi

Untitled design
Published on

ವಡೋದರಾ: ಪ್ರಧಾನಿ ನರೇಂದ್ರ ಮೋದಿ ಇಂದು(26) ಗುಜರಾತ್‌ನ ವಡೋದರಾದಲ್ಲಿ ರೋಡ್ ಶೋ ನಡೆಸಿದರು. ಜನರು ತಮ್ಮ ನೆಚ್ಚಿನ ನಾಯಕನನ್ನು ನೋಡಲು ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು.

ಆಪರೇಷನ್ ಸಿಂಧೂರ್ ಬಗ್ಗೆ ನಿರಂತರವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುವುದರ ಮೂಲಕ ಗಮನ ಸೆಳೆದಿದ್ದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಅವರ ಕುಟುಂಬ ಸದಸ್ಯರು ಸಹ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಕರ್ನಲ್ ಖುರೇಷಿ, ಅವರ ಪೋಷಕರು, ಸಹೋದರ ಮೊಹಮ್ಮದ್ ಸಂಜಯ್ ಖುರೇಷಿ ಮತ್ತು ಸಹೋದರಿ ಶೈನಾ ಸುನ್ಸಾರಾ ಸೇರಿದಂತೆ ಅವರ ಇಡೀ ಕುಟುಂಬ ತಮ್ಮ ಬೆಂಬಲವನ್ನು ತೋರಿಸಲು ರೋಡ್ ಶೋನಲ್ಲಿ ಭಾಗಿಯಾಗಿತ್ತು.

ಕರ್ನಲ್ ಸೋಫಿಯಾ ಖುರೇಷಿ ಅವರ ಅವಳಿ ಸಹೋದರಿ ಶೈನಾ ಸುನ್ಸಾರಾ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ಬಹಳಷ್ಟು ಕೆಲಸ ಮಾಡಿದ್ದಾರೆ. ಸೋಫಿಯಾ ನನ್ನ ಅವಳಿ ಸಹೋದರಿ. ಸಹೋದರಿ ದೇಶಕ್ಕಾಗಿ ಏನಾದರೂ ಮಾಡಿದಾಗ, ಅದು ನನಗೆ ಮಾತ್ರವಲ್ಲದೆ ಇತರರಿಗೂ ಸ್ಫೂರ್ತಿ ನೀಡುತ್ತದೆ. ಆಕೆ ಇನ್ನು ಮುಂದೆ ನನ್ನ ಸಹೋದರಿ ಮಾತ್ರವಲ್ಲ, ದೇಶದ ಸಹೋದರಿ ಎಂದು ಹೇಳಿದರು.

ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂದೂರ್‌ನ ಯಶಸ್ಸನ್ನು ಶ್ಲಾಘಿಸುವ ಜನರಿಂದ ರಸ್ತೆಗಳ ಉದ್ದಕ್ಕೂ ಭಾರತೀಯ ಸಶಸ್ತ್ರ ಪಡೆಗಳ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಭಾರತ ಇತ್ತೀಚೆಗೆ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ನಂತರ ಪ್ರಧಾನಿ ಮೋದಿ ತಮ್ಮ ತವರು ರಾಜ್ಯಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net