

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಪ್ರಮುಖ ಗಣ್ಯರು ಮಹಾತ್ಮ ಗಾಂಧಿ ಅವರ 72ನೇ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ದೆಹಲಿಯ ರಾಜ್ಘಾಟ್ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿ, ಗಾಂಧಿಯನ್ನು ಸ್ಮರಿಸಿದರು.
ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಕೂಡ ಗಾಂಧಿ ಸಮಾಧಿಗೆ ನಮಸ್ಕರಿಸಿದರು. ಈ ವೇಳೆ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರಾವಣೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಮತ್ತು ವಾಯುಪಡೆಯ ಮುಖ್ಯಸ್ಥರಾದ ಏರ್ ಚೀಫ್ ಮಾರ್ಷಲ್ ಆರ್.ಕೆ.ಎಸ್ ಭಡೂರಿಯಾ ಅವರು ಕೂಡ ಗಾಂಧಿ ಸಮಾಧಿಗೆ ನಮಸ್ಕರಿಸಿದರು.
ಇದೇ ವೇಳೆ ಹಿರಿಯ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಕೂಡ ರಾಜಘಾಟ್ಗೆ ತೆರಳಿ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. (ಏಜೆನ್ಸೀಸ್)