ಮಂಗಳೂರು ಗೋಲಿಬಾರ್​ ವಿಚಾರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್

BM Farrok 3 jan 20
Published on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರು ಪತ್ರ ಬರೆಯುವ ಮುಖೇನ ಮಂಗಳೂರು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ದೇಶದೆಲ್ಲಡೆ ಪ್ರತಿಭಟನೆಗಳು ನಡೆದಿವೆ. ಅದರಂತೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಇಬ್ಬರು ವ್ಯಕ್ತಿ ಪೊಲೀಸ್​ ಗೋಲಿಬಾರ್​ನಲ್ಲಿ ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿ ಹಿಂಪಡೆದಿದ್ದು, ಮಾನವೀಯತೆಯ ನೆಲೆಯಲ್ಲಿ ಮಧ್ಯಸ್ಥಿಕೆ ವಹಿಸಿ ಕುಟುಂಬಸ್ಥರಿಗೆ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಫಾರೂಕ್​ ಮನವಿ ಮಾಡಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net