'ಚಂದ್ರಯಾನ-3' ಯಶಸ್ಸಿನ ಬೆನ್ನಲ್ಲೇ ಇಸ್ರೋ ಮುಖ್ಯಸ್ಥರಿಗೆ ಕರೆ ಮಾಡಿದ ಪ್ರಧಾನಿ ಮೋದಿ

Untitled design (51)
Published on

ನವದೆಹಲಿ: ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಯ 'ಚಂದ್ರಯಾನ-3' ಇದೀಗ ಯಶಸ್ವಿಯಾಗಿದ್ದು, ಇಡೀ ದೇಶವೇ ಈ ಸಂಭ್ರಮದಲ್ಲಿ ತೊಡಗಿದೆ. ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್​ ಅನ್ನು ಸಕ್ಸೆಸ್​​ಫುಲ್​ ಲ್ಯಾಂಡಿಂಗ್​ ಮಾಡಿದ ಇಸ್ರೋ ಸಂಸ್ಥೆಯ ಸಾಧನೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಚಂದ್ರಯಾನ-3 ಮಿಷನ್​ನ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಅವರು, ಬಾಹ್ಯಾಕಾಶ ಸಂಸ್ಥೆಯ ಮುಖ್ಯಸ್ಥ ಎಸ್. ಸೋಮನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಇಸ್ರೋ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

"ನಿಮ್ಮ ಹೆಸರು ಸೋಮನಾಥ್, ಸೋಮನಾಥ್ ಎಂದರೆ ಚಂದಿರ. ನಿಮಗೆ ಮತ್ತು ನಿಮ್ಮ ಇಡೀ ತಂಡಕ್ಕೆ ನನ್ನ ಕಡೆಯಿಂದ ಅನೇಕ ಅಭಿನಂದನೆಗಳು. ಶೀಘ್ರದಲ್ಲೇ, ನಿಮ್ಮನ್ನು ವೈಯಕ್ತಿಕವಾಗಿ ಅಭಿನಂದಿಸಲು ನಾನು ನಿಮ್ಮೊಂದಿಗೆ ಇರುತ್ತೇನೆ" ಎಂದು ಪ್ರಧಾನಿ ಇಸ್ರೋ ಮುಖ್ಯಸ್ಥರಿಗೆ ದೂರವಾಣಿ ಕರೆಯಲ್ಲಿ ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net