

ನವದೆಹಲಿ: ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿರುವ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಂತೆ ಕಾಂಗ್ರೆಸ್ಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. "ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ” ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ನಿರೀಕ್ಷೆ ಊಹಿಸಲಾಗದ ರೀತಿಯಲ್ಲಿ ಉಲ್ಟಾ ಹೊಡೆದಿದೆ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಲು ಮುಂದಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಯಾರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಗ್ಗೆ ಜನರಿಗೆ ಕುತೂಹಲ ಹೆಚ್ಚಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಪಷ್ಟ ಬಹುಮತದೊಂದಿಗೆ ಪಡೆಯುವ ಮೂಲಕ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ನ್ನು ದಾಟಿದೆ. ಆಡಳಿತ ಪಕ್ಷವಾಗಿದ್ದ ಬಿಜೆಪಿ 64 ಸ್ಥಾನಗಳನ್ನು ಗೆದ್ದುಕೊಂಡಿದ್ದ, ಪಕ್ಷದ ಪ್ರಮುಖ ನಾಯಕರು ಸೋಲು ಕಂಡಿದ್ದಾರೆ. ಅಂತೆಯೇ ಜೆಡಿಎಸ್ 20 ಸ್ಥಾನಗಳಿಗೆ ತೃಪ್ತಿ ಪಟ್ಟಿದ್ದು, 4 ಪಕ್ಷೇತರ ಅಭ್ಯರ್ಥಿಗಳು ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.