Modi Pays Tribute To SM Krishna: ಎಸ್​ಎಂ ಕೃಷ್ಣ ನಿಧನದಿಂದ ನನಗೆ ಅತೀವ ದುಃಖವಾಗಿದೆ...ಪ್ರಧಾನಿ ಮೋದಿ ಸಂತಾಪ

smkrishna
Published on

ನವದೆಹಲಿ: ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ( Sm Krishna ) (92) ಇಂದು ವಿಧಿವಶರಾಗಿದ್ದಾರೆ. ಎಸ್​ಎಂ ಕೃಷ್ಣ  ಅಸಾಧಾರಣ ನಾಯಕರಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ  ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  (Modi Pays Tribute To SM Krishna )

ಟ್ವೀಟ್​​​ನಲ್ಲಿ ಏನಿದೆ?: ಎಸ್​ಎಂ ಕೃಷ್ಣ ಅವರು ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ಶ್ರಮಿಸಿದ್ದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಗಮನಹರಿಸಿದ್ದಾರೆ. ಅವರು ಉತ್ತಮ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು  ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ  ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಎಸ್.ಎಂ.ಕೃಷ್ಣ ಜೀ ಅವರೊಂದಿಗೆ ಸಂವಹನ ನಡೆಸಲು ಅನೇಕ ಅವಕಾಶ ಸಿಕ್ಕಿತ್ತು. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.

ಕರ್ನಾಟಕದ ಮಾಜಿ ಸಿಎಂ ಎಸ್​.ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.  ನಾಡಿನ ಗಣ್ಯರು ಕೃಷ್ಣ ಅವರ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಇನ್ನು ಅವರ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದ ಸುತ್ತ ಬ್ಯಾರಿಕೇಡ್​​ ಹಾಕಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಹಲವು ರಾಜಕಾರಣಿಗಳು ಎಸ್.ಎಂ.ಕೃಷ್ಣ ನಿವಾಸಕ್ಕೆ ಬರುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸರು ಅವರ ನಿವಾಸದ ಸುತ್ತ ಭದ್ರತೆ ಒದಗಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net