ಅಭಿವೃದ್ಧಿ, ಉತ್ತಮ ಆಡಳಿತಕ್ಕೆ ಗೆಲುವು; ದೆಹಲಿ ಜನಶಕ್ತಿಗೆ ಪ್ರಧಾನಿ ಮೋದಿ ಸಂತಸ | Delhi Election Results

ವಿಜಯವಾಣಿ - 2025-02-08T153910.487
Published on

Narendra Modi: ಇಂದು (ಫೆ.08) ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, 27 ವರ್ಷಗಳ ಬಳಿಕ 'ನಮೋ' ಸರ್ಕಾರ ಅಧಿಕಾರಕ್ಕೆ ಬಂದಿದೆ. ಅರವಿಂದ್ ಕೇಜ್ರಿವಾಲ್​, ಮನೀಶ್​ ಸಿಸೋಡಿಯಾ ಸೇರಿದಂತೆ ಪ್ರಮುಖ ಆಪ್​ ನಾಯಕರು ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಹ್ಯಾಟ್ರಿಕ್​ ಗೆಲುವು ದಾಖಲಿಸುವ ಮೂಲಕ ದೆಹಲಿಯಲ್ಲಿ ಮತ್ತೇ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಂಡಿದ್ದ ಎಎಪಿಗೆ ಇದೀಗ ಭಾರೀ ಮುಖಭಂಗ ಉಂಟಾಗಿದೆ.

ಇನ್ನು ಗೆಲುವಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣವಾದ 'ಎಕ್ಸ್'​ ಮುಖೇನ ದೆಹಲಿ ಜನತೆಗೆ ಹೃತ್ಪೂರ್ವಕ ವಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, "ಜನಶಕ್ತಿಯೇ ಸರ್ವಶ್ರೇಷ್ಠ. ಉತ್ತಮ ಆಡಳಿತ, ಅಭಿವೃದ್ಧಿ ಸದಾ ಗೆಲ್ಲುತ್ತದೆ. ಬಿಜೆಪಿಗೆ ನೀಡಿದ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರಿಗೆ ವಂದನೆಗಳು. ನಿಮ್ಮ ಪ್ರೀತಿ, ಆಶೀರ್ವಾದ ಸ್ವೀಕರಿಸಲು ಬಹಳ ಖುಷಿಯಿದೆ. ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಯು ಪ್ರಮುಖ ಪಾತ್ರ ವಹಿಸಲಿದೆ ಎಂದು ಈ ಮೂಲಕ ನಾವು ನಿಮಗೆ ಭರವಸೆ ಕೊಡುತ್ತೇವೆ" ಎಂದಿದ್ದಾರೆ.

"ಈ ಗೆಲುವಿಗಾಗಿ ನಮ್ಮೆಲ್ಲಾ ಕಾರ್ಯಕರ್ತರ ಬಗ್ಗೆ ನನಗೆ ತುಂಬಾ ಹೆಮ್ಮೆಯಿದೆ. ಈ ಅತ್ಯುತ್ತಮ ಫಲಿತಾಂಶಕ್ಕೆ ನೀವೆಲ್ಲ ಕಾರಣರಾಗಿದ್ದೀರಿ. ನಾವು ಇನ್ನೂ ಹೆಚ್ಚು ಹುರುಪಿನಿಂದ ಕೆಲಸ ಮಾಡುತ್ತೇವೆ ಮತ್ತು ದೆಹಲಿಯ ಜನರಿಗೆ ಉತ್ತಮ ಸೇವೆ ಕಲ್ಪಿಸಿಕೊಡುವತ್ತ ಶ್ರಮಿಸುತ್ತೇವೆ" ಎಂದು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net