ಮಂಗಳವಾರ ಸಂಜೆ 4 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Modi
Published on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜೂನ್​ 30) ಸಾಯಂಕಾಲ 4 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಕಚೇರಿ ಮಾಡಿದ ಟ್ವೀಟ್​ನಲ್ಲಿ ಈ ವಿಷಯ ತಿಳಿಸಲಾಗಿದೆ. ಆದರೆ, ಯಾವ ವಿಚಾರವಾಗಿ ಮಾತನಾಡಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.

ಚೀನಾದ 59 ಆ್ಯಪ್​ಗಳ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ಇದಲ್ಲದೇ, ಕೇಂದ್ರ ಗೃಹ ಇಲಾಖೆ ಅನ್​ಲಾಕ್​ 2.0 ಸಂಬಂಧಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ಇದೇ ವಿಚಾರವಾಗಿ ಮಾತನಾಡಬಹುದು ಎಂದು ನಿರೀಕ್ಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net