

ವಿಟ್ಲ: ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ಒಂದು ಸುತ್ತಿನ ವಿಚಾರಣೆ ನಡೆದಿದೆ.
ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕನಿಂದ ಕೃತ್ಯ ನಡೆದಿದೆ. ೧೦ಕ್ಕೂ ಅಽಕ ವಿದ್ಯಾರ್ಥಿಗಳ ಮೇಲೆ ಶಿಕ್ಷಕ ವಿಕೃತಿ ಮೆರೆದಿದ್ದಾನೆ ಎನ್ನಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ. ವಿಟ್ಲ ಪೊಲೀಸ್ ಠಾಣೆಗೂ ಪಾಲಕರು ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇದೇ ಶಿಕ್ಷಕ ಈ ಹಿಂದೆಯೂ ಕರೋಪಾಡಿ ಗ್ರಾಮದಲ್ಲಿ ಶಿಕ್ಷಕನಾಗಿದ್ದಾಗ ಠಾಣೆಗೆ ದೂರು ನೀಡಲಾಗಿತ್ತು. ಆಮೇಲೆ ಈತನನ್ನು ಬೇರೆಡೆಗೆ ವರ್ಗಾಯಿಸಿ, ವಿಷಯ ಮುಚ್ಚಿ ಹಾಕಲಾಗಿತ್ತು