ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಮನ್ಸ್

bsy
Published on

ನವದೆಹಲಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿಯ ಕೋರ್ಟ್ ಸಮನ್ಸ್ ನೀಡಿದೆ.

ಆರೋಪಪಟ್ಟಿಯನ್ನು ವಿಚಾರಣೆಗೆ ಪರಿಗಣಿಸಿದ ಕೋರ್ಟ್, ಜುಲೈ 15ರಂದು ಖುದ್ದಾಗಿ ಕೋರ್ಟ್‍ಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ನಾಲ್ಕು ಆರೋಪಿಗಳಿಗೆ ಸಮನ್ಸ್ ನೀಡಿದೆ.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿತ್ತು. ತನಿಖೆಗೆ ಹಾಜರಾಗುವಂತೆ ಬಿಎಸ್‍ವೈಗೆ ನೋಟಿಸ್ ಕೊಟ್ಟಿದ್ದರಿಂದ ಅವರು ಕಾಲಾವಕಾಶ ಕೇಳಿದ್ದರು. ಬಳಿಕ ತನಿಖೆಗೆ ಹಾಜರಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು, ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಪಡೆದಿದ್ದರು. ನಂತರ ಮಾಜಿ ಸಿಎಂ ಮಧ್ಯಂತರ ಜಾಮೀನು ಪಡೆದಿದ್ದರು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಎಸ್​ವೈ ಬಂಧನ ಭೀತಿಯಲ್ಲಿದ್ದ ಪಾರಾಗಿದ್ದರು. ಇನ್ನು ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯನ್ನು (ಚಾರ್ಜ್​ಶೀಟ್) ಸಲ್ಲಿಕೆ ಮಾಡಲಾಗಿದೆ. ಜೂನ್ 27 ರಂದು ಪೊಲೀಸರು, ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net