

ಬೆಂಗಳೂರು: ವ್ಯಕ್ತಿಯೊಬ್ಬನನ್ನು ಚಿಕ್ಕಪ್ಪನ ಮಗನೇ ಕೊಲೆ ಮಾಡಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮಾರುತಿ (30) ಎಂಬ ವ್ಯಕ್ತಿ ಕೊಲೆಯಾಗಿದ್ದು, ಈತನ ಚಿಕ್ಕಪ್ಪನ ಮಗ ಅಶೋಕ್ ಕೊಲೆ ಆರೋಪಿ. ತಿಪ್ಪಸಂದ್ರ ಲೇಕ್ ಬಳಿಯ ಗುರುಸಿದ್ದೇಶ್ವರ ಥಿಯೇಟರ್ ಬಳಿ ಈ ಕೊಲೆ ನಡೆದಿದ್ದು, ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆ ಮಾಡಲಾಗಿದೆ. ಮಾರುತಿ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆರೋಪಿ ಅಶೋಕ್ ಆಟೋ ಚಾಲಕನಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಶವವನ್ನು ಆರ್.ವಿ. ಆಸ್ಪತ್ರೆಗೆ ರವಾನಿಸಲಾಗಿದೆ. ಹತ್ಯೆ ನಡೆದ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.