ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ; ಮದ್ಯದ ಅಮಲಿನಲ್ಲಿ ಕಿರಾತಕರ ಹೈಡ್ರಾಮಾ | Police Attack

ದೊಡ್ಡಬಳ್ಳಾಪುರದಲ್ಲಿ ಗಲಾಟೆ ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Doddaballapur Police Attack
ದೊಡ್ಡಬಳ್ಳಾಪುರದಲ್ಲಿ ಪೊಲೀಸರ ಮೇಲೆಯೇ ಹಲ್ಲೆ
Published on: 
Summary

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆ ಹಲ್ಲೆ

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿಯಲ್ಲಿ ಘಟನೆ

ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Doddaballapur Crime: ಜಗಳ ನಡೆಯುತ್ತಿದ್ದರೆ ಬಿಡಿಸಲು ಹೋಗೋದು ಸಾಮಾನ್ಯ. ಆದ್ರೆ ಜಗಳ ಬಿಡಿಸಲು ಬಂದ ಪೊಲೀಸರ ಮೇಲೆಯೇ ತಿರುಗಿಬಿದ್ದರೆ ಹೇಗೆ? ಹೌದು.. ದೊಡ್ಡಬಳ್ಳಾಪುರದಲ್ಲಿ ಇಂಥದ್ದೇ ಘಟನೆ ನಡೆದಿದೆ. ಗಲಾಟೆ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಲಾಗಿದೆ. ಇದೀಗ ಈ ದೃಶ್ಯಗಳು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿಯಲ್ಲಿ ಇಬ್ಬರು ಯುವಕರು ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು 112 ತುರ್ತು ಸೇವೆಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಮುಂದಾದಾಗ, ಯುವಕರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ.

ಪೊಲೀಸರಿಗೆ ಗಾಯ

ಹಲ್ಲೆಯಿಂದ 112 ಸಿಬ್ಬಂದಿ ಮಣಿಕಂಠ ಹಾಗೂ ರಾಯಪ್ಪ ಪೂಜಾರಿ ಅವರ ಎದೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಗಾಯಗೊಂಡ ಇಬ್ಬರನ್ನೂ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇಬ್ಬರು ಆರೋಪಿಗಳು ವಶಕ್ಕೆ

ಘಟನೆಗೆ ಸಂಬಂಧಿಸಿದಂತೆ ಹರಹಾನ್ ಸರಿಹಾನ್ ಹಾಗೂ ಬಾಸಿರ್ ಅಲಿಯಾಸ್ ಗಿದ್ದಾ ಎಂಬವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಮೊದಲು ಪರಸ್ಪರ ಗಲಾಟೆ ಮಾಡಿಕೊಂಡಿದ್ದು, ಬಳಿಕ ಜಗಳ ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net