ಪೊಲೀಸ್ ಕಮೀಷನರ್ ಅಮಾನತು ಆದೇಶ ಹಿಂಪಡೆಯಲಿ

manavi
ಪೊಲೀಸ್ ಅಧಿಕಾರಿ ಬಿ.ದಯಾನಂದ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ವಾಲ್ಮೀಕಿ ನಾಯಕ ಯುವಪಡೆಯ ಆರ್.ಹರೀಶ್, ಮೇಘರಾಜ್, ಲಕ್ಷ್ಮಣ್, ಮಂಜಪ್ಪ, ವರುಣ್, ನಾಗರಾಜ್, ಹನುಮಂತಪ್ಪ ಮುಂತಾದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ದಯಾನಂದ್ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಸರ್ಕಾರ ಕೂಡಲೇ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿ ರಾಜ್ಯ ವಾಲ್ಮೀಕಿ ನಾಯಕ ಯುವಪಡೆ ಶಿವಮೊಗ್ಗ ಘಟಕದ ಪ್ರಮುಖರು ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.

ಕಾಂಗ್ರೆಸ್ ಸರ್ಕಾರವು ದಯಾನಂದ್ ಮತ್ತಿತರ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಅಕ್ಷಮ್ಯ. ಸರ್ಕಾರ ತನ್ನ ತಪ್ಪನ್ನು ಮುಚ್ಚಿಹಾಕಲು ಅಧಿಕಾರಿಗಳನ್ನು ಅಮಾನತು ಮಾಡಿದೆ. ಕಾಲ್ತುಳಿತದಿಂದ ರಾಜ್ಯದ ಜನರ ಮನಸ್ಸಿನಲ್ಲಿ ಭುಗಿಲೆದ್ದ ಆಕ್ರೋಶ ತಣಿಸಲು ಇಂತಹ ನಾಟಕೀಯ ನಡೆ ಅನುಸರಿಸಲಾಗಿದೆ ಎಂದು ದೂರಿದರು.

ಸರ್ಕಾರ ಅಮಾನತು ಆದೇಶ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಸಂಘಟನೆಗಳು ಹೋರಾಟ ಮಾಡಬೇಕಾಗುತ್ತದೆ. ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದರು.

ವಾಲ್ಮೀಕಿ ನಾಯಕ ಯುವಪಡೆ ಜಿಲ್ಲಾಧ್ಯಕ್ಷ ಆರ್.ಹರೀಶ್, ಪ್ರಮುಖರಾದ ಆರ್.ಲಕ್ಷ್ಮಣ್, ಮೇಘರಾಜ್, ಮಂಜಪ್ಪ, ಗಣೇಶ್, ರಾಜು, ವರುಣ್, ಹನುಮಂತಪ್ಪ, ನಾಗರಾಜ್, ಭೀಮಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net