

ಬಾಗಲಕೋಟೆ: ತಾಲೂಕಿನ ಕಲಾದಗಿ ಗ್ರಾಮದಲ್ಲಿ ನಿನ್ನೆ(ಬುಧವಾರ) ಸುರಿದ ಧಾರಾಕಾರ ಮಳೆಯಲ್ಲೂ ಕೊಡೆ ಹಿಡಿದುಕೊಂಡೇ ಡಿಎಆರ್ ಪೇದೆ ಮಾರುತಿ ಭಜಂತ್ರಿ ಅವರು ಕರ್ತವ್ಯ ನಿರ್ವಹಿಸಿದ್ದ ದೃಶ್ಯ ವೈರಲ್ ಆಗಿದ್ದು, ಸಾರ್ವಜನಿಕರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಅವರಿಂದ ಮಾರುತಿ ಭಜಂತ್ರಿಗೆ ಪ್ರಶಂಸನಾ ಪತ್ರವೂ ಸಿಕ್ಕಿದೆ.
ಕರೊನಾ ಹಿನ್ನೆಲೆ ಕಲಾದಗಿ ಗ್ರಾಮದ ಸೀಲ್ಡೌನ್ ಪ್ರದೇಶದಲ್ಲಿ ನಿನ್ನೆ ಸಂಜೆ ಮಾರುತಿ ಭಜಂತ್ರಿಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಗ್ರಾಮದಲ್ಲಿ ಧಾರಾಕಾರ ಮಳೆ ಸುರಿದಿತ್ತು. ಮಳೆಯಲ್ಲೂ ಜಾಗ ಬಿಟ್ಟು ಕದಲದ ಅವರು ಕೊಡೆ ಹಿಡಿದುಕೊಂಡೇ ಕರ್ತವ್ಯ ನಿರ್ವಹಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಮೆಚ್ಚುಗೆ ಪಡೆದಿತ್ತು.