ಸೆ.10 ಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ

exam (1)
Published on


ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್(ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿ ಸಂಬಂಧ ಸೆ.೧೦ ರಂದು ಬೆಂಗಳೂರು ನಗರದ ೪೧ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಈ ೪೧ ಪರೀಕ್ಷಾ ಕೇಂದ್ರಗಳಲ್ಲಿ ೨೦,೫೬೦ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎದುರಿಸಲಿದ್ದಾರೆ. ಈಗಾಗಲೇ ಅಭ್ಯರ್ಥಿಗಳ ಮಾಹಿತಿಯನ್ನು ಇಲಾಖಾ ಜಾಲತಾಣದಲ್ಲಿ (https://ksp.karnataka.gov.in or https://ksp-recruitment.in). ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ಈ ಜಾಲತಾಣಗಳಲ್ಲಿ ಡೌನ್‌ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಜಾಲತಾಣ ಸಂಪರ್ಕಿಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net