ಕರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್​ ಬಲಿ

Police Died By Coronavirus
Published on

ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಮತ್ತೊಬ್ಬ ಪೊಲೀಸ್ ಪೇದೆ ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ರಾಜರಾಜೇಶ್ವರಿನಗರ ಪೊಲೀಸ್ ಠಾಣೆ ಪೇದೆ ಈರಪ್ಪ ಪಾಟೀಲ್ ಮೃತರು. ಕೆಲವು ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದರು. ನಂತರ ಈರಪ್ಪ ಪಾಟೀಲ್ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ಸೋಂಕು ಇರುವುದು ದೃಢವಾಗಿತ್ತು.

ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಬೆಳಗ್ಗೆ 10.30ರಲ್ಲಿ ಈರಪ್ಪ ಪಾಟೀಲ್ ಅಸುನೀಗಿದ್ದಾರೆ.ಇದನ್ನೂ ಓದಿ: ಬೆಂಗಳೂರಿಗೆ ಎನ್ಐಎ ವಿಭಾಗೀಯ ಕಚೇರಿ ಶೀಘ್ರ: ಸುಳಿವು ನೀಡಿದ್ರು ಸಂಸದ ತೇಜಸ್ವಿ ಸೂರ್ಯ

ಸಿಲಿಕಾನ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಂಚಾರ ದಟ್ಟಣೆ ನಿರ್ವಹಿಸಲು ಪೊಲೀಸರು ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ. ಕರ್ತವ್ಯದ ನಡುವೆ ಅಂದಾಜು 2300ಕ್ಕೂ ಅಧಿಕ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕರೊನಾ ಸೋಂಕು ತಗುಲಿ ಗುಣಮುಖ ಆಗಿದ್ದಾರೆ. 20 ಪೊಲೀಸರು ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net