ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

IMG-20231105-WA0001
Published on

ಕೋಲಾರ: ಜಿಲ್ಲೆಯ ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹತ್ಯೆ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಭಾನುವಾರ ಮುಂಜಾನೆ ಗುಂಡು ಹೊಡೆದು ಬಂಧಿಸಿದ್ದಾರೆ.
ಕೊಲೆ ಆರೋಪಿ ಆಶೋಕ್ ಮಾಲೂರು ಕೈಗಾರಿಕೆ ಪ್ರದೇಶದಲ್ಲಿ ತಲೆಮರಿಸಿಕೊಂಡಿದ್ದ, ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಹಲ್ಲೆಯಿಂದ  ಪೊಲೀಸ್ ಸಿಬ್ಬಂದಿ ಕೋದಂಡಪಾಣಿ, ಅಶೋಕ್ ಎಂಬುವರು ಗಾಯಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿ ಹಾಗೂ ಆರೋಪ್ ಅಶೋಕ್ ಗೆ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಗರದ ಜಿಲ್ಲಾ ಎಸ್ಎ‌ನ್ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net