

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪದಕ ಭಾಜನರಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪದಕ ವಿತರಿಸದಂತೆ ಮುಖ್ಯ ಚುನಾವಣಾ ಆಯೋಗ ತಡೆ ನೀಡಿದೆ.
ಪೊಲೀಸ್ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 134 ಪೊಲೀಸರಿಗೆ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿಗೆ ಭಾಜನರಾದವರಿಗೆ ಏಪ್ರಿಲ್ 2ರಂದು ಮುಖ್ಯಮಂತ್ರಿ ವಿತರಿಸುತ್ತಿದ್ದರು.
ವಿಧಾನಸಭಾ ಚುನಾವಣೆ ನಡೆಯುತ್ತಿರುವ ಕಾರಣ ಏಪ್ರಿಲ್ 2 ರಂದು ಸರಳವಾಗಿ ಪೊಲೀಸ್ ಧ್ವಜ ದಿನಾಚರಣೆಗೆ ಅನುಮತಿ ನೀಡಲಾಗಿದೆ. ಅಲ್ಲದೆ, ಯಾವುದೇ ಪೊಲೀಸರಿಗೆ ಪ್ರಶಸ್ತಿ ನೀಡದೆ ಆಚರಣೆ ಮಾಡುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.