ರಾಜ್ಯದಲ್ಲಿ ಕಾವೇರಿದ ಕಾವೇರಿ ಕಿಚ್ಚು; ಪೊಲೀಸ್ ಬಿಗಿ ಬಂದೋಬಸ್ತ್

Untitled design - 2023-09-22T112125.399
Published on

ಬೆಂಗಳೂರು: 15 ದಿನಗಳವರೆಗೂ ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್​ ನೀರು ಹರಿಸಲು ರಾಜ್ಯಕ್ಕೆ ಸುಪ್ರೀಂಕೋರ್ಟ್​ ಆದೇಶ ನೀಡಿದ ಬೆನ್ನಲ್ಲೇ ಇದೀಗ ಕರುನಾಡಲ್ಲಿ ಕಾವೇರಿ ಕಿಚ್ಚು ಹೆಚ್ಚಿದ್ದು, ಹಲವು ಸಂಘಟನೆಗಳು ತೀವ್ರ ಪ್ರತಿಭಟನೆಗೆ ಮುಂದಾಗಿದೆ. ಈ ಬೆನ್ನಲ್ಲೇ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ಆಗದಂತೆ ನಗರದ ಪೊಲೀಸರು ಹೈ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಇಂದು (ಸೆ.22) ಬೆಳಗ್ಗೆ 11 ಗಂಟೆಯ ನಂತರ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಿನ್ನಲೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರ ಭದ್ರತೆ ನಿಯೋಜಿಸಲಾಗಿದೆ.

ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ ಆದೇಶ ನೀಡಿದ ಬೆನ್ನಲ್ಲೇ ಕಾವೇರಿಯನ್ನೇ ನಂಬಿ ಬದುಕುತ್ತಿರುವ ಮಂಡ್ಯದಲ್ಲಿ ಕೂಡ ಕಾವೇರಿ ಹೋರಾಟ ತೀವ್ರಗೊಂಡಿದೆ. ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಪಂಪ್ ಹೌಸ್​ಗೆ ವಿವಿಧ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಿ ಬೆಂಗಳೂರಿಗೆ ನೀರು ಸರಬರಾಜು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net