

ಬೆಂಗಳೂರು: ಆರು ತಿಂಗಳ ಹಿಂದಷ್ಟೇ ಬಡ್ತಿ ಪಡೆದ ಪೊಲೀಸ್ ಅಧಿಕಾರಿ ಜೀವನ್ಮರಣ ಹೋರಾಟ ನಡೆಸಿದರೂ ಕೊನೆಗೆ ಸಾವಿಗೆ ಶರಣಾಗುವಂತಾಗಿದೆ. ರಾಜಧಾನಿಯ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರನ್ನು ಕ್ಯಾನ್ಸರ್ ಬಲಿ ಪಡೆದಿದೆ.
ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಸಾವಿಗೀಡಾದವರು. 2010ರ ಬ್ಯಾಚ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಧನಂಜಯ್, ಆರು ತಿಂಗಳ ಹಿಂದಷ್ಟೇ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ್ದರು.
ಹಲಸೂರುಗೇಟ್, ಇಂದಿರಾನಗರ ಠಾಣೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ ಇವರು, ಪ್ರಸ್ತುತ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಇನ್ಸ್ಪೆಕ್ಟರ್ ಆಗಿದ್ದರು. ಕ್ಯಾನ್ಸರ್ಪೀಡಿತರಾದ್ದರಿಂದ ಕಳೆದ ಕೆಲ ತಿಂಗಳುಗಳಿಂದ ರಜೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.