

ಹುಣಸೂರು: ಗಣೇಶ ಹಬ್ಬದ ಅಂಗವಾಗಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದರು.
ಸೋಮವಾರ ನಗರದ ಕಲ್ಕುಣಿಕೆ ಬಡಾವಣೆಯಿಂದ ಆರಂಭಿಸಿ ಬೈಪಾಸ್ ರಸ್ತೆಯ ಮೂಲಕ ಶಬ್ಬೀರ್ ನಗರದವರೆಗೆ ಪಥ ಸಂಚಲನ ನಡೆಸಿದರು. ಈ ವೇಳೆ ಮಾತನಾಡಿದ ನಗರಠಾಣೆ ಇನ್ಸ್‌ಪೆಕ್ಟರ್ ದೇವೇಂದ್ರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಪಥಸಂಚಲನ ನಡೆಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಚತುರ್ಥಿ ಆಚರಣೆಗೆ ಸರ್ಕಾರ ಸೂಚಿಸಿರುವ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದರು.
ಡಿವೈಎಸ್‌ಪಿ ಎಂ.ಮಹೇಶ್, ನಗರ ಮತ್ತು ಗ್ರಾಮಾಂತರ ಠಾಣೆ ಪೊಲೀಸ್ ಸಿಬ್ಬಂದಿ ಹಾಜರಿದ್ದರು.