ರೌಡಿಗಳ ನಿವಾಸದ ಮೇಲೆ ಪೊಲೀಸರ ದಾಳಿ

Crime Logo
Published on

ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು ಕೆಲವರು ರೌಡಿ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ಮೇರೆಗೆ ಸೋಮವಾರ ಬೆಳ್ಳಗೆ ಪೂರ್ವ ವಿಭಾಗದ ಪೊಲೀಸರು ರೌಡಿಗಳ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
೩೪೬ ರೌಡಿಗಳ ನಿವಾಸದ ಮೇಲೆ ದಾಳಿ ಮಾಡಿ ತಪಾಸಣೆ ಮಾಡಲಾಗಿದೆ. ಪ್ರಸ್ತುತ ಯಾವ ಉದ್ಯೋಗ ಮಾಡಲಾಗುತ್ತಿದೆ ಸೇರಿ ಇತ್ಯಾದಿ ಮಾಹಿತಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಈ ವೇಳೆ ಕೆಲ ರೌಡಿಗಳ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯ ವೇಳೆ ಕೆಲ ರೌಡಿಗಳು ಮನೆಯಲ್ಲಿ ಇರಲಿಲ್ಲ. ಕರೆ ಮಾಡಿದ್ದಾಗ ಹೊರಗಡೆ ಇರುವುದಾಗಿ ತಿಳಿಸಿದ್ದಾರೆ. ಅಂತವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮತದಾನ ದಿನದಂದ ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಮುಂಜಾಗ್ರತ ಕ್ರಮಗಳನ್ನ ಕೈಗೊಂಡಿದ್ದು ಇದರ ಪೂರ್ವಭಾವಿಯಾಗಿ ರೌಡಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಶಂಕೆ ಮೇರೆಗೆ ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net