ಬೆಳಂಬೆಳಗ್ಗೆ ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ಮಾಡಿದ ಪಿಎಸ್‌ಐ; ಅಪರಾಧ ಪ್ರಕರಣದಲ್ಲಿ ಭಾಗಿಯಾಗದಂತೆ ಎಚ್ಚರಿಕೆ

7-RNR-04A
Published on

ರಾಣೆಬೆನ್ನೂರ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಹರ ಠಾಣೆ ಪಿಎಸ್‌ಐ ಗಡ್ಡೆಪ್ಪ ಗುಂಜಟಗಿ ನೇತೃತ್ವದ ತಂಡ ಗುರುವಾರ ಬೆಳಂಬೆಳಗ್ಗೆ ನಗರದಲ್ಲಿರುವ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗ್ಗೆ 5 ಗಂಟೆ ಸುಮಾರಿಗೆ ರೌಡಿಶೀಟರ್‌ಗಳ ಪಟ್ಟಿಹಿಡಿದು ಆಯಾ ಬಡಾವಣೆಗಳಲ್ಲಿರುವ ಅವರ ಮನೆಗೆ ತೆರಳಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿರುವ ಬಗ್ಗೆ ಪರಿಶೀಲಿಸಿದರು. ನಂತರ ರೌಡಿಶೀಟರ್‌ಗಳ ಚಲನವಲನ ಕುರಿತು ಮಾಹಿತಿ ಪಡೆದರು. ಅಲ್ಲದೆ ಕುಟುಂಬದವರೊಂದಿಗೆ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದರು.
ಮುಂದಿನ ದಿನದಲ್ಲಿ ಯಾವುದೇ ರೀತಿಯ ಗಲಾಟೆ ಸೇರಿ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಬಾರದು ಎಂದು ಎಚ್ಚರಿಕೆ ನೀಡಿದರು. ಕೆಲವರನ್ನು ಠಾಣೆಗೆ ಕರೆಯಿಸಿ ಇನ್ಮುಂದೆ ಯಾರೂ ಅಪರಾಧ ಪ್ರಕರಗಳಲ್ಲಿ ಭಾಗಿಯಾಗುವಂತಿಲ್ಲ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net