

ಬೆಂಗಳೂರು: ಶುಕ್ರವಾರ (ಮಾ.01) ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ್ದ ನಿಗೂಢ ವಸ್ತು ಸ್ಫೋಟ ಪ್ರಕರಣಕ್ಕೆ ಇದೀಗ ಹಲವು ತಿರುವು ಪಡೆದುಕೊಳ್ಳುತ್ತಿದ್ದು, ಅದು ಬಾಂಬ್ ಸ್ಫೋಟ ಎಂದು ಡಿಜಿಪಿ ಅಲೋಕ್ ಮೋಹನ್ ನಿನ್ನೆ ತಿಳಿಸಿದರು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಘಟನೆಗೆ ಪ್ರತಿಕ್ರಿಯಿಸಿದ್ದು, ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಒತ್ತಿ ಹೇಳಿದರು.
ಹೋಟೆಲ್ನಲ್ಲಿ ಬಾಂಬ್ ಸ್ಪೋಟಕ್ಕೆ ಅಸಲಿ ಕಾರಣವೇನು? ನಿಗೂಢ ವಸ್ತುಗಳ ಬಗ್ಗೆ ವರದಿ ಹೇಳೋದೇನು ಎಂಬುದನ್ನು ಸದ್ಯ ನಿರೀಕ್ಷಿಸಬೇಕಿದೆ. ಬಾಂಬ್ ಬ್ಲಾಸ್ಟ್ನಿಂದ ಗಾಯಗೊಂಡವರು ಇದೀಗ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದ ಸಿಎಂ, ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ, ಮಾತನಾಡಿಸಿದ್ದಾರೆ.
ಘಟನೆಯ ಹಿನ್ನೆಲೆ ಬಾಂಬ್ ಸ್ಪೋಟ ಪ್ರಕರಣ ಸಂಭವಿಸಿದ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಶೀಲನೆ ನಡೆಸಿ, ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇದೀಗ ಸಿಸಿಟಿವಿ ಕ್ಯಾಮೆರಾಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ತನಿಖಾ ತಂಡ, ಬಸ್ಗಳನ್ನು ಸಹ ಪರಿಶೀಲಿಸುತ್ತಿದೆ.
ಈ ಘಟನೆಯ ಬೆನ್ನಲ್ಲೇ ಬೆಂಗಳೂರಿನ ಸುತ್ತಮುತ್ತ ಹೈಅಲರ್ಟ್ ಆಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತೆಲ್ಲಾ ಕಟ್ಟೆಚ್ಚರ ವಹಿಸಲಾಗಿದೆ.