

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಜೈಲು ಪಾಲಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್ ಬೆನ್ನು ನೋವಿನ ಕಾರಣ ಚಿಕಿತ್ಸೆಗೆಂದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ನಟನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಇನ್ನೂ ನಟ ದರ್ಶನ್ (Darshan) ಅವರ ಬೇಲ್ಅನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ಅಪ್ಡೇಟ್ ಒಂದು ಹೊರಬಿದ್ದಿದ್ದು, ನಟ ದರ್ಶನ್ಗೆ ಮತ್ತಷ್ಟು ಕಂಟಕ ಎದುರಾಗಿದೆ.
ಈ ಕುರಿತು ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (B Dayanand), ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ (Darshan) ತೂಗುದೀಪ ಅವರಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು. ಮೇಲ್ಮನವಿ ಸಲ್ಲಿಸುವ ಸಂಬಂಧ ಸರ್ಕಾರದಿಂದ ಅನುಮತಿ ದೊರೆತ್ತಿದ್ದು, ಸದ್ಯದಲ್ಲೇ ಕೋರ್ಟ್ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆನ್ನು ನೋವಿನ ಕಾರಣ ನಟ ದರ್ಶನ್ (Darshan) ಜಾಮೀನಿನ ಮೇಲೆ ಹೊರಬಂದಿದ್ದು, ಸದ್ಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ದರ್ಶನ್ಗೆ ಜಾಮೀನು ನೀಡಿರುವುದನ್ನು ವಿರೋಧಿಸಿರುವ ಪೊಲೀಸರು ಸಾಕ್ಷಿ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದು, ದರ್ಶನ್ಗೆ ಜೈಲಾ ಬೇಲಾ ಎಂದು ಕಾದು ನೋಡಬೇಕಿದೆ.
ಬೆನ್ನು ನೋವಿನ ಕಾರಣ ನಟ ದರ್ಶನ್ (Darshan) ಮಧ್ಯಂತರ ಜಾಮೀನಿನ ಮೇಲೆ ಹೊರಬಂದು ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ವೈದ್ಯರು ಅವರನ್ನು ವಿಐಪಿ ಸೂಟ್ನಲ್ಲಿ (VIP Suit) ಇರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ಕುಟುಂಬಸ್ಥರು ಸೇರಿದಂತೆ ದರ್ಶನ್ ಭೇಟಿಗೆ ಏಳು ಮಂದಿಗೆ ಮಾತ್ರ ಅವಕಾಶವಿದ್ದು, ಪೊಲೀಸರು ಹಾಗೂ ಆಸ್ಪತ್ರೆಯ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಈಗಾಗಲೇ ಮೊದಲನೇ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಬರುವ ವಾರ ಎರಡನೇ ವರದಿ ಸಲ್ಲಿಸುವ ನಿರೀಕ್ಷೆ ಇದೆ.