

ಉತ್ತರಕನ್ನಡ: ಯಲ್ಲಾಪುರದ ಕುಚಗಾಂವ ಕ್ರಾಸ್ ಬಳಿ ಪೊಲೀಸ್ ವ್ಯಾನ್ ಪಲ್ಟಿಯಾಗಿದ್ದು, 16 ಜನ ಗಾಯಗೊಂಡಿದ್ದಾರೆ.
ವ್ಯಾನ್ನಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಕಚೇರಿ ಸಿಬ್ಬಂದಿ ಸಾತೊಡ್ಡಿ ಜಲಪಾತ ಮಾರ್ಗವಾಗಿ ತೆರಳುತ್ತಿದ್ದರು. ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ.
ಕುಚಗಾಂವ ಕ್ರಾಸ್ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ವ್ಯಾನ್, ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಾಯಾಳುಗಳಿಗೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮೂರು ವಿದ್ಯುತ್ ಕಂಬಗಳಿಗೂ ಹಾನಿಯಾಗಿದೆ.