

Pray : ಯಾರಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ಅವರ ಡ್ರೈವಿಂಗ್ ಲೈಸನ್ಸ್ ಮತ್ತು ಪಾಸ್ಪೋರ್ಟ್ ರದ್ದು ಮಾಡಲಾಗುವುದು ಎಂದು ಮೀರತ್ ಪೊಲೀಸರು ಎಚ್ಚರಿಸಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ.
ಮೀರತ್(ಉತ್ತರಪ್ರದೇಶ) ಎಸ್ಪಿ ಆಯುಷ್ ವಿಕ್ರಮ್ ಈ ಕುರಿತು ಮಾತನಾಡಿದ್ದು, ''ಅವರು ಬೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಮತ್ತು ಹಾಗೆ ಮಾಡುವುದು ಕಂಡುಬಂದರೆ ಯಾರಾದರೂ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ''.
ಈ ನಿಟ್ಟಿನಲ್ಲಿ ಧಾರ್ಮಿಕ ಮುಖಂಡರು ಮತ್ತು ಇಮಾಮ್‌ಗಳಿಗೆ ಮನವಿ ಮಾಡಿದ್ದೇನೆ ಮತ್ತು ಜನರು ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ಸಲ್ಲಿಸುವಂತೆ ಒತ್ತಾಯಿಸಿದ್ದೇನೆ. ಈ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಕಳೆದ ವರ್ಷ ಇಂತಹ 200 ಉಲ್ಲಂಘನೆ ಪ್ರಕರಣಗಳು ದಾಖಲಾಗಿದೆ. ಈ ವರ್ಷವೂ ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸುವವರ ಮೇಲೆ ನಿಗಾ ಇಡಲಾಗಿದೆ. ಪೊಲೀಸರು ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಿಕೊಂಡು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಿದ್ದಾರೆ. ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೂ ನಿಗಾ ಇಡುತ್ತಾರೆ. ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.(ಏಜೆನ್ಸೀಸ್)