ಕ್ರೀಡಾಂಗಣ ಬಳಕೆಗೆ ನೀತಿ; ದುರ್ಬಳಕೆ, ಅತಿಕ್ರಮಣ, ಪರಭಾರೆ ನಿಯಂತ್ರಿಸಲು ಕ್ರಮ|Policy for stadium use

sports
Published on

ಬೆಂಗಳೂರು: ಕ್ರೀಡಾಂಗಣ ದುರ್ಬಳಕೆ, ಅತಿಕ್ರಮಣ, ಪರಭಾರೆ, ಅಕ್ರಮ ಚಟುವಟಿಕೆ ನಿಯಂತ್ರಿಸಲು ಸರ್ಕಾರ ಕ್ರೀಡಾಂಗಣ ಬಳಕೆ ನೀತಿ (Policy for stadium use; measures to control misuse, encroachment) ಜಾರಿಗೆ ತಂದಿದೆ.

ಕ್ರೀಡಾಂಗಣ ದುರುಪಯೋಗ, ಬಾಡಿಗೆ, ಗುತ್ತಿಗೆ ನೀಡುವಲ್ಲಿ ಅವ್ಯವಹಾರ, ಒತ್ತುವರಿ, ಅಕ್ರಮ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಕ್ರೀಡಾಂಗಣ ಬಳಕೆಯನ್ನು ಕೆಲವು ಕಟ್ಟುನಿಟ್ಟಿನ ನಿಯಮಗಳ ಮೂಲಕ ನಿಯಂತ್ರಿಸಲು ಕೆಲವು ನಿಬಂಧನೆ ವಿಧಿಸಿ ಸುತ್ತೋಲೆ ಹೊರಡಿಸಿದೆ.

ಕೀಡಾಂಗಣಗಳನ್ನು ಸರ್ಕಾರದ ಅನುಮತಿ ಇಲ್ಲದೇ ದೀರ್ಫಾವಧಿಗೆ ಬಾಡಿಗೆ ನೀಡುವಂತಿಲ್ಲ ಅಥವಾ ಇತರೆ ರೀತಿಯಲ್ಲಿ ಪರಭಾರೆ ಮಾಡುವಂತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣಗಳ ದೈನಂದಿನ ನಿರ್ವಹಣೆಗೆ ಜಿಲ್ಲಾ ಕೀಡಾಂಗಣಗಳ ನಿರ್ವಹಣಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದ್ದು, ಸಾಮಾನ್ಯ ಮಾರ್ಗಸೂಚಿ ರೂಪಿಸಿ ಯುವ ಸಲಬೀಕರಣ ಮತ್ತು ಕ್ರೀಡಾ ಇಲಾಖೆಯ ಎಲ್ಲ ಜಿಲ್ಲೆಗಳ ಜಿಲ್ಲಾ ಉಪ/ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ.

ಗುತ್ತಿಗೆ/ಹೊರಗುತ್ತಿಗೆ ನೇಮಕ ಇಲ್ಲ

ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿಗಳು ಸರ್ಕಾರದ ಪೂರ್ವಾನುಮತಿ ಇಲ್ಲದೇ ಗುತ್ತಿಗೆ/ಹೊರಗುತ್ತಿಗೆ ಸೇರಿದಂತೆ ಯಾವುದೇ ನೇಮಕಾತಿ ಮಾಡುವಂತಿಲ್ಲ. ಜಿಲ್ಲೆಯ ಯಾವುದೇ ಇಲಾಖಾ ಕ್ರೀಡಾಂಗಣದಲ್ಲಿ 50 ಲಕ್ಷ ರೂ. ವೆಚ್ಚ ಮೀರಿದ ಯಾವುದೇ ಒಂದು ಅಬಿವೃದ್ಧಿ ಕಾರ್ಯ ಅಥವಾ ವಾರ್ಷಿಕ ಒಟ್ಟು 1 ಕೋಟಿ ರೂ. ಮೇಲ್ಪಟ್ಟ ಕಾಮಗಾರಿ/ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಮೊದಲು ಇಲಾಖೆಯ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ತಾತ್ಕಾಲಿಕ/ಶಾಶ್ವತ ಪರಭಾರೆ ನಿಷೇಧ

ಕೀಡಾಂಗಣದ ಆಸ್ತಿಗಳನ್ನು ವಾರ್ಷಿಕ ಬಾಡಿಗೆಗೆ ನೀಡುವ ಅಥವಾ ಹೊರಗುತ್ತಿಗೆ ನೀಡುವ ಸಂದರ್ಭದಲ್ಲಿ ಇಲಾಖೆಯ ಪೂರ್ವಾನುಮತಿ ಪಡೆಯತಕ್ಕದ್ದು. ಇಲಾಖೆಯ ಕ್ರೀಡಾಂಗಣಗಳನ್ನು ಹಾಗೂ ಇಲಾಖಾ ಆಸ್ತಿಗಳನ್ನು ಇಲಾಖೆಯ ಪೂರ್ವಾನುಮತಿ ಇಲ್ಲದೇ ಇತರೆ ಇಲಾಖೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ತಾತ್ಕಾಲಿಕ ಅಥವಾ ಶಾಶ್ವತವಾಗಿ ಪರಭಾರೆ ಮಾಡುವುದನ್ನು

ಕಡ್ಡಾಯವಾಗಿ ನಿಷೇಧಿಸಿದೆ ಸುತ್ತೋಲೆ ಹೊರಡಿಸಲಾಗಿದೆ.

ಉಲ್ಲಂಸಿದರೆ ಅಧಿಕಾರಿಗಳ ವಿರುದ್ಧ ಕ್ರಮ

ನಿಯಮ ಉಲಂಘನೆಯಾಗಿದ್ದಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು ನಿಯಮಗಳನ್ನು ಉಲ್ಲಂಘಿಸಿರುವ ಅಧಿಕಾರಿಗಳ ವಿವರಗಳನ್ನು ಮಾ.15ರ ಒಳಗೆ ಇಲಾಖೆಗೆ ಮಾಹಿತಿ ಒದಗಿಸಬೇಕು. ಇಲಾಖಾ ಆಸ್ತಿಗಳಲ್ಲಿ ನಿಯಮ ಉಲಂಘಿಸಿ, ಯಾವುದೇ ಚಟುವಟಿಕೆಗಳು ನಡೆದಲ್ಲಿ ಅಥವಾ ಇಲಾಖಾ ಆಸ್ತಿಗಳನ್ನು ಇತರರು ಅತಿಕ್ರಮಿಸಿದಲ್ಲಿ, ದುರ್ಬಳಕೆ ಮಾಡಿಕೊಂಡಲ್ಲಿ, ಅವುಗಳನ್ನು ತಡೆಯುವುದು ಹಾಗೂ ತಕ್ಷಣ ಇಲಾಖಾ ಮುಖ್ಯಸ್ಥರ ಗಮನಕ್ಕೆ ತರುವುದು ಪ್ರತಿಯೊಬ್ಬ ಜಿಲ್ಲಾ ಮಟ್ಟದ ಅಧಿಕಾರಿಯ ಜವಾಬ್ದಾರಿಯಾಗಿರುತ್ತದೆ ಎಂದು ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ.

ಮುಖ್ಯಾಂಶಗಳು

-ಸರ್ಕಾರದ ಅನುಮತಿ ಇಲ್ಲದೆ ದೀರ್ಘಾವಧಿ ಬಾಡಿಗೆ ನೀಡುವಂತಿಲ್ಲ.

-ಶಾಶ್ವತ/ತಾತ್ಕಾಲಿಕ ಪರಭಾರೆ ಕಡ್ಡಾಯ ನಿಷೇಧ.

-ಗುತ್ತಿಗೆ/ಹೊರ ಗುತ್ತಿಗೆ ಯಾವುದೇ ನೇಮಕ ಮಾಡುವಂತಿಲ್ಲ.

-ಅಕ್ರಮ ಚಟುವಟಿಕೆ, ಅತಿಕ್ರಮಣ ಕಂಡಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜವಾಬ್ದಾರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net