ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮನೆಯಲ್ಲಿರುವ ನವಜಾತ ಶಿಶುಗಳನ್ನು ಗುರುತಿಸಿ ಅಂತಹ ಮಕ್ಕಳಿಗೆ ಕಡ್ಡಾಯವಾಗಿ ಪೊ?ಲಿಯೋ ಲಸಿಕೆಯನ್ನು ನೀಡಬೇಕು. ತಾಯಂದಿರ ಸಭೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅರಿವು ಮೂಡಿಸಬೇಕು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಲಸಿಕಾ ದಿನ ಮತ್ತು ಸ್ಥಳಗಳ ಮಾಹಿತಿಯನ್ನು ಪ್ರಚಾರ ಮಾಡಬೇಕು. ಎಲ್ಲಾ ಶಾಲೆಗಳು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಪೋಲಿಯೋ ದಿನದ ಮುಂಚಿತವಾಗಿ ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು, ಹಾಗೂ ಇತರೇ ವಲಸೆ ಪ್ರದೇಶಗಳಲ್ಲಿ 0-5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ, ಆದ್ಯತೆ ನೀಡಿ ಲಸಿಕೆ ಹಾಕಿಸುವಂತೆ ಕ್ರಮವಹಿಸಬೇಕು ಎಂದರು.