ಪೊಲಿಟಿಕಲ್ ಜಡ್ಜ್‌ಮೆಂಟ್!; ವಸತಿ ಸಚಿವರ ವಿಶ್ಲೇಷಣೆ

2 Dwd 1 Zameer ahmed khan
Published on

ಬೆಂಗಳೂರು: ಮುಡಾ ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಒತ್ತಿ ಹೇಳಿದ್ದಾರೆ.

ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಇದೆಲ್ಲ ರಾಜಕೀಯ, ರಾಜಕೀಯ ಜಡ್ಜ್‌ಮೆಂಟ್ ಎಂದು ವಿಶ್ಲೇಷಿಸಿದರು. ಈ ಅಭಿಪ್ರಾಯಕ್ಕೆ ಮುಡಾ ಪ್ರಕರಣದ ದೂರು ದಾರ ಅಬ್ರಹಾಂ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಲಯದ ತೀರ್ಮಾನವನ್ನು ಈ ರೀತಿ ಕರೆದಿರುವುದು ಅಕ್ಷಮ್ಯ. ನಾವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಈ ಬೆಳವಣಿಗೆಯಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಜಮೀರ್ ಅಹ್ಮದ್, ಮೂಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥ ದಲ್ಲಿ ನಾನು ಹೇಳಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ನ್ಯಾಯಾಲಯ ದ ಬಗ್ಗೆ ನನಗೆ ಅಪಾರ ಗೌರವ ಇದ್ದು, ನ್ಯಾಯಾಲಯ ದ ತೀರ್ಪು ಗೆ ಎಲ್ಲರೂ ತಲೆ ಬಾಗಿದ್ದೇವೆ. ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷ ಗಳು ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬುದು ನನ್ನ ಅಭಿಪ್ರಾಯ ಆಗಿತ್ತು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net