ನಿಯಮ ಪಾಲಿಸಿದರೆ ಮಾಲಿನ್ಯ ನಿಯಂತ್ರಣ

coc
ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಬಿ.ಗೋಪಿನಾಥ್, ಜೋಯ್ಸ ರಾಮಾಚಾರ್, ಕೆ.ಶಿಲ್ಪಾ, ಜಿ.ವಿಜಯಕುಮಾರ್, ಡಿ.ಆರ್.ಕುಮಾರಸ್ವಾಮಿ, ಎಸ್.ಎಸ್.ಉದಯ್‌ಕುಮಾರ್ ಇತರರಿದ್ದರು.
Published on

ಶಿವಮೊಗ್ಗ: ಪರಿಸರಕ್ಕೆ ಎದುರಾಗಿರುವ ಅಪಾಯಗಳಲ್ಲಿ ಪ್ಲಾಸ್ಟಿಕ್ ಕೂಡ ಒಂದು. ಹೀಗಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮಾಲಿನ್ಯ ನಿಯಂತ್ರಣ ಮಂಡಳಿ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮಂಡಳಿ ಸುವರ್ಣ ಮಹೋತ್ಸವ ಹಾಗೂ ಪರಿಸರ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಫೌಂಡ್ರಿ ಕೈಗಾರಿಕೆಗಳು ಸುಟ್ಟ ಮರಳಿನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಹಂತದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ವ್ಯವಸ್ಥೆಗಳ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಪರಿಸರ ಅಧಿಕಾರಿ ಕೆ.ಶಿಲ್ಪಾ ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವವನ್ನು ರಾಜ್ಯಾದ್ಯಂತ ಆಚರಿಸುತ್ತಿದೆ. ಅಪಾಯಕಾರಿ ಮತ್ತು ಇತರ ತ್ಯಾಜ್ಯಗಳು, ಜೈವಿಕ, ವೈದ್ಯಕೀಯ ತ್ಯಾಜ್ಯ, ಪರಿಸರ ಪರಿಣಾಮ ಮೌಲ್ಯಮಾಪನ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಶಬ್ಧಮಾಲಿನ್ಯ, ಘನತ್ಯಾಜ್ಯ, ಇ-ತ್ಯಾಜ್ಯ, ಹಾರು ಬೂದಿ, ಕಟ್ಟಡ ನಿರ್ಮಾಣ ತ್ಯಾಜ್ಯ ಹೀಗೆ ವಿವಿಧ ತ್ಯಾಜ್ಯ ಪ್ರಕಾರಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕುರಿತು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ನಿವೃತ್ತ ಮುಖ್ಯ ಪರಿಸರ ಅಧಿಕಾರಿ ಡಿ.ಆರ್.ಕುಮಾರಸ್ವಾಮಿ, ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಜೋಯ್ಸ ರಾಮಾಚಾರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಎಂ. ಅಂಗಡಿ, ಎಸ್.ಎಸ್.ಉದಯ್‌ಕುಮಾರ್, ಪ್ರದೀಪ್ ವಿ.ಎಲಿ, ಆರ್.ರಾಜಶೇಖರ್, ಜಿ.ವಿ.ಕಿರಣ್‌ಕುಮಾರ್, ಡಾ. ಲಕ್ಷ್ಮೀದೇವಿ ಗೋಪಿನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net