ಆಡಂಬರ, ಮೋಡಿಯ ಮಾತಿಗೆ ಸೀಮಿತ

university
ಕುವೆಂಪು ವಿವಿಯಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆಯನ್ನು ಪ್ರೊ. ಶರತ್ ಅನಂತಮೂರ್ತಿ ಉದ್ಘಾಟಿಸಿದರು. ಡಾ. ಎಂ.ಎಸ್.ಶೇಖರ್, ಎ.ಎಲ್.ಮಂಜುನಾಥ್, ಡಾ. ನೆಲ್ಲಿಕಟ್ಟೆ ಸಿದ್ದೇಶ್ ಇತರರಿದ್ದರು.
Published on

ಶಿವಮೊಗ್ಗ: ಅಂಬೇಡ್ಕರ್ ವಿಚಾರಧಾರೆ ಮತ್ತು ಸಂವಿಧಾನದ ಆಶಯಗಳನ್ನು ಭಾವನಾತ್ಮಕ ಮಾತುಗಳಿಗೆ ಸೀಮಿತಗೊಳಿಸದೆ ಬದ್ಧತೆಯೊಂದಿಗೆ ಅನುಷ್ಠಾನಗೊಳಿಸುವ ಹೊಣೆ ಎಲ್ಲರ ಮೇಲಿದೆ ಸಾಹಿತಿ ಮತ್ತು ಚಿಂತಕ ಡಾ. ಎಂ.ಎಸ್.ಶೇಖರ್ ಹೇಳಿದರು.

ಕುವೆಂಪು ವಿವಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಂದು ಸಂವಿಧಾನ ದಿನಾಚರಣೆ ಆಡಂಬರ, ಮೋಡಿಯ ಮಾತುಗಳು ಮತ್ತು ಆಚರಣೆಗಳಿಗೆ ಸೀಮಿವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, ಸಂವಿಧಾನ ಪ್ರಜಾಪ್ರಭುತ್ವ ಅನುಷ್ಠಾನದ ಶಾಸನಾತ್ಮಕ ಗ್ರಂಥ ಮಾತ್ರವಲ್ಲ, ಇದು ದೇಶದ ಪ್ರತಿಯೊಬ್ಬ ಪ್ರಜೆಯ ಆತ್ಮಸಾಕ್ಷಿಯನ್ನು ಕಾಪಿಟ್ಟುಕೊಂಡಿರುವ ಮೇರು ಗ್ರಂಥ. ಭಾರತೀಯ ಸಂವಿಧಾನಕ್ಕೆ ಮೂಲ ಪ್ರೇರಣೆಯಾಗಿದ್ದು ಅಮೆರಿಕದ ಸಂವಿಧಾನ ಮತ್ತು ಫ್ರೆಂಚ್ ಕ್ರಾಂತಿ ಎಂದು ತಿಳಿಸಿದರು.

ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಹಣಕಾಸು ಅಧಿಕಾರಿ ಪ್ರೊ. ಎಚ್.ಎನ್.ರಮೇಶ್, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ನೆಲ್ಲಿಕಟ್ಟೆ ಸಿದ್ದೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net