

ಬಿಗ್ ಸ್ಕ್ರೀನ್ನಿಂದ ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ
ಬೆಂಗಳೂರು: ಸ್ಯಾಂಡಲ್ವುಡ್ ನಟ ಗಣೇಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ಮುಂಗಾರು ಮಳೆ. ಈ ಸಿನಿಮಾದಲ್ಲಿ ಗಣೇಶ್ ಅವರಿಗೆ ಜೋಡಿಯಾಗಿ ಪೂಜಾ ಗಾಂಧಿ ಅವರು ಕಾಣಿಸಿಕೊಂಡಿದ್ದರು. ನಂತರ ಸ್ಟಾರ್ ನಟರ ಜತೆ ಸಿನಿಮಾ ಮಾಡಿ ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಗಳಿಸಿದ್ದ ಪೂಜಾ ಗಾಂಧಿ ಅವರು ಈಗ ಬಿಗ್ ಸ್ಕ್ರೀನ್ನಿಂದ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.
ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ನಿನಗಾಗಿ’ ಸೀರಿಯಲ್ ಸಿನಿಮಾ ನಟಿಯ ಕಥಾ ಹಂದರವನ್ನು ಹೊಂದಿದೆ. ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ಈ ಸೀರಿಯಲ್‌ಗೆ ಪೂಜಾ ಗಾಂಧಿ ವಿಶೇಷ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ.
ಪೂಜಾ ಗಾಂಧಿ ಜೊತೆಗಿನ ಸುಂದರ ಫೋಟೋಗಳನ್ನು ದಿವ್ಯಾ ಉರುಡುಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಮುದ್ದು ಕನ್ನಡತಿ’ ಎಂದು ದಿವ್ಯಾ ಕ್ಯಾಪ್ಷನ್ ನೀಡಿದ್ದಾರೆ. ಈ ಸೀರಿಯಲ್‌ನಲ್ಲಿ ನಟಿಸುತ್ತಿರುವ ಸಹಕಲಾವಿದರು ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಮುಂಗಾರು ಮಳೆ, ಮಿಲನಾ, ಕೃಷ್ಣ, ಅನು, ತಾಜ್‌ಮಹಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೂಜಾ ಗಾಂಧಿ ನಟಿಸಿದ್ದಾರೆ. ‘ಬಿಗ್ ಬಾಸ್ ಸೀಸನ್ 3’ರಲ್ಲಿ ಪೂಜಾ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಸಿನಿಮಾ ಇಂಡಸ್ಟ್ರಿಯಲ್ಲಿ ಮಿಂಚುತ್ತಿದ್ದ ಪೂಜಾ ಗಾಂಧಿ ಅವರು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದು ಅಭಿಮಾನಿಗಳಿಗೆ ಸಂತೋಷವನ್ನು ಕೊಟ್ಟಿದೆ.