

ಬೆಂಗಳೂರು: ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಬಹುಕಾಲದ ಗೆಳೆಯ ಅವರೊಂದಿಗೆ ಇಂದು (ನವೆಂಬರ್ 29) ಮಂತ್ರ ಮಾಂಗಲ್ಯ ಪದ್ಧತಿಯಂತೆ ವೈವಾಹಿಕ ಜೀವಕ್ಕೆ ಅಡಿಯಿಟ್ಟಿದ್ದಾರೆ.
ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು. ಈ ಪರಿಚಯವೇ ಪ್ರೇಮಕ್ಕೆ ಮುನ್ನುಡಿ ಬರೆದಿದೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ.
ಯಲಹಂಕದ ಖಾಸಗಿ ರೆಸಾರ್ಟ್ನಲ್ಲಿ ನಡೆದ ಮದುವೆ ಸಮಾರಂಭಕ್ಕೆ ಯೋಗರಾಜ್ ಭಟ್, ಸುಧಾರಾಣಿ, ಶುಭ ಪೂಂಜಾ, ಸುಮನಾ ಕಿತ್ತೂರು, ಸಾಹಿತಿ ಜಯಂತ್ ಕಾಯ್ಕಿಣಿ ಸೇರಿದಂತೆ ಅನೇಕ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದ್ದಾರೆ.