ಚಂದ್ರಯಾನ-3: ತಿರುಪತಿಯಲ್ಲಷ್ಟೇ ಅಲ್ಲ, ಕುಕ್ಕೆ ಸುಬ್ರಹ್ಮಣ್ಯದಲ್ಲೂ ಪೂಜೆ!

Kukke Subrahmanya ISRO Chandrayaan3
Published on

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ ಸಂದರ್ಭದಲ್ಲಿ ತಿರುಮಲ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿ, ಪ್ರಾರ್ಥನೆ ಸಲ್ಲಿಸಿ ಮುಂದುವರಿಯವುದನ್ನು ಒಂದು ಪದ್ಧತಿಯಂತೆ ಅನುಸರಿಸಿಕೊಂಡು ಬಂದಿದೆ.

ಅದೇ ರೀತಿ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಇಂದು ಪೂಜೆ ಸಲ್ಲಿಸಲಾಗಿದೆ. ಚಂದ್ರಯಾನ 3 ಸಲುವಾಗಿ ಶುಭ ಹಾರೈಸಿ ಪೂಜೆ ಮಾಡಲಾಗಿರುವ ಕುರಿತು ಸೇವೆಯ ಚೀಟಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲು ಆರಂಭಿಸಿದೆ. ಮಾತ್ರವಲ್ಲ, ಈ ಕುರಿತು ದೇವಸ್ಥಾನದ ಸೋಷಿಯಲ್ ಮೀಡಿಯಾದಲ್ಲೂ ಸೇವೆಯ ಚೀಟಿ ಸಹಿತ ಶುಭಾಶಯ ಕೋರಲಾಗಿದೆ.

'ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ತಾಯಿ ಭಾರತೀಯ ಹೆಸರು ಪ್ರಪಂಚದಲ್ಲೇ ಅಗ್ರಗಣ್ಯವಾಗಲಿ ಎಂದು ಪಂಚಮಿಯ ದಿನವಾದ ಇಂದು ಶ್ರೀ ನಾಗದೇವರಿಗೆ ಹಾಲೆರೆದು ನಾಗ ತಂಬಿಲ (ಕಾರ್ತೀಕ ಪೂಜೆ) ನಡೆಸಿ ಮತ್ತು ಶ್ರೀ ಪುರದೊಡೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯನಲ್ಲಿ ಆಡಳಿತ ಮಂಡಳಿ ಮತ್ತು ಊರ ಹಿರಿಯರೊಂದಿಗೆ ಸೇರಿ ಪ್ರಾರ್ಥಿಸಲಾಯಿತು' ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net