ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ರ ಮೇಲೆ ದಾಳಿ ನಡೆಸಲು ಭಯೋತ್ಪಾದಕರ ಸಂಚು: ಗುಪ್ತಚರ ಇಲಾಖೆಯಿಂದ ಮಾಹಿತಿ

yogi-adityanath 123 feb
Published on

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಮೇಲೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಗೋರಖ್​ಪುರದ ಗೋರಖನಾಥ್​ ದೇವಾಲಯದಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ. ದಾಳಿಕೋರ ಪತ್ರಕರ್ತರ ವೇಷದಲ್ಲಿ ದೇವಾಲಯ ಪ್ರವೇಶ ಮಾಡಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಗುಪ್ತಚರ ಮಾಹಿತಿ ಆಧಾರದ ಮೇಲೆ ದೇವಾಲಯದ ಭದ್ರತೆಯನ್ನು ಅಧಿಕಗೊಳಿಸಲಾಗಿದೆ. ಅಲ್ಲದೆ ಪತ್ರಕರ್ತರ ಎಲ್ಲ ಮಾಹಿತಿ ಪಡೆದು ಅವರಿಗೆ ಹೊಸದಾಗಿ ಗುರುತಿನ ಪತ್ರ ನೀಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಲಖನೌದಲ್ಲಿ ಪತ್ರಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ಗೋರಖ್​ಪುರದಲ್ಲಿ ಅವರು ಪತ್ರಕರ್ತರೊಂದಿಗೆ ಬೆರೆಯುತ್ತಾರೆ. ಗೋರಖನಾಥ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಜನತಾ ದರ್ಬಾರ್​ ನಡೆಸಿ ಸ್ಥಳೀಯ ಜನರ ಸಮಸ್ಯೆ ಆಲಿಸುತ್ತಾರೆ. ಇದನ್ನೇ ಬಳಸಿಕೊಂಡು ಅವರ ಮೇಲೆ ದಾಳಿ ನಡೆಸಲು ಸಂಚು ನಡೆದಿದೆ ಎಂದು ಗುಪ್ತಚರ ದಳ ಮಾಹಿತಿ ರವಾನಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net