

ಚಿತ್ತಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆಯೆ ರಾಜಕೀಯ ಪಕ್ಷಗಳ ನಡುವೆ ಘರ್ಷಣೆ ನಡೆಯುವುದು ಸಹಜ. ಆರೋಪ, ಪ್ರತ್ಯಾರೋಪಗಳು ಸಾಮಾನ್ಯ. ಈಗಿನ ಕಾಲದಲ್ಲಿ ಪಕ್ಷಗಳು ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಿಸಿವೆ. ಜನರನ್ನು ತಲುಪಲು ಮತ್ತು ಎದುರಾಳಿಗಳ ಕಾಲೆಳೆಯಲು ಇದು ಅದ್ಭುತ ವೇದಿಕೆಯಾಗಿದೆ. ಸದ್ಯ ಚಿತ್ತಪುರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ವಾರ್ ನಡೆಯುತ್ತಿದ್ದು ಪ್ರಿಯಾಂಕ್ ಖರ್ಗೆಯನ್ನು ಬಿಜೆಪಿ ಹಿಗ್ಗಾ ಮುಗ್ಗಾ ಟ್ರೋಲ್ ಮಾಡುತ್ತಿದೆ.