ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಿಕೆ: ಏ.20ರವರೆಗೆ ಪರೀಕ್ಷೆ ಡೌಟ್

Published on

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ಮುಂದೂಡಿದೆ. 2019ನೇ ಸಾಲಿನ ಪರೀಕ್ಷೆಯನ್ನು ಏ.11ರಂದು ನಡೆಸಲು ನಿಗದಿಪಡಿಸಲಾಗಿತ್ತು. ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಏ.20ರವರೆಗೆ ಪರೀಕ್ಷೆ ಡೌಟ್

ಎಸ್ಸೆಸ್ಸೆಲ್ಸಿ ಸೇರಿ ವಿವಿಧ ಶಾಲಾ ಹಂತದ ಪರೀಕ್ಷೆಗಳನ್ನು ಏ.20ರವರೆಗೆ ಮುಂದೂಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 7ರಿಂದ 9ನೇ ತರಗತಿ ಪರೀಕ್ಷೆ, ಎಸ್ಸೆಸ್ಸೆಲ್ಸಿ ಪರೀಕ್ಷೆ, ಆರ್​ಟಿ ಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ, ಶಾಲೆಗಳಲ್ಲಿ 2020-21ನೇ ಸಾಲಿಗೆ ದಾಖಲಾತಿ ಪ್ರಕ್ರಿಯೆ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಏ.20ರ ನಂತರ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ವಾಟ್ಸ್ ಆಪ್, ಎಸ್​ಎಂಎಸ್, ಇ-ಮೇಲ್ ಅಥವಾ ಇತರೆ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಮಾಹಿತಿ ರವಾನಿಸಲು ಶಾಲಾ ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಗೆ ನಿರ್ದೇಶನ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net